ಬೆಂಗಳೂರು: 2012 ನೇ ಸಾಲಿನ ವರ್ಗಾವಣೆಗೆ ಅರ್ಜಿ ಸಲ್ಲಿಸಬಯಸುವ ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲೆ, ಪ್ರೌಢ ಶಾಲೆಗಳ ಶಿಕ್ಷಕರು, ಅಧಿಕಾರಿಗಳು ಮತ್ತು ವಿಷಯ ಪರಿವೀಕ್ಷಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳ ದೈಹಿಕ ಶಿಕ್ಷಣ ಪರಿವೀಕ್ಷಕರು ಆನ್‌ಲೈನ್ ಮೂಲಕ ಏಪ್ರಿಲ್ 5 ರ ಒಳಗೆ ಅರ್ಜಿ ಸಲ್ಲಿಸಲು ತಿಳಿಸಿದೆ.
ಹೆಚ್ಚಿನ ಮಾಹಿತಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ, ಜಿಲ್ಲಾ ಉಪ ನಿರ್ದೇಶಕರ ಕಚೇರಿ ಅಥವಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಲ್ಲಿ ಹಾಗೂ ಇಲಾಖೆಯ ವೆಬ್‌ಸೈಟ್ www. school education.kar.nic.in ಮೂಲಕ ಮಾಹಿತಿ ಪಡೆಯಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.