ADVERTISEMENT

ವರ್ಗಾವಣೆ: ಹೈಕೋರ್ಟ್ ಮೆಟ್ಟಿಲೇರಿದ ರೋಹಿಣಿ ಸಿಂಧೂರಿ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2018, 19:40 IST
Last Updated 24 ಮಾರ್ಚ್ 2018, 19:40 IST
ವರ್ಗಾವಣೆ: ಹೈಕೋರ್ಟ್ ಮೆಟ್ಟಿಲೇರಿದ ರೋಹಿಣಿ ಸಿಂಧೂರಿ
ವರ್ಗಾವಣೆ: ಹೈಕೋರ್ಟ್ ಮೆಟ್ಟಿಲೇರಿದ ರೋಹಿಣಿ ಸಿಂಧೂರಿ   

ಬೆಂಗಳೂರು: ವರ್ಗಾವಣೆ ತಕರಾರಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಲು ಸೂಚಿಸಿರುವ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ನಿರ್ದೇಶನ ಪ್ರಶ್ನಿಸಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

ಇದೇ 27ರಂದು ಈ ಅರ್ಜಿ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ವಿಚಾರಣೆಗೆ ಬರಲಿದೆ.

ಪ್ರಕರಣದಲ್ಲಿ ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ, ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಮೈಸೂರು ಜಿಲ್ಲಾಧಿಕಾರಿ ಡಿ.ರಣದೀಪ್‌ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ADVERTISEMENT

‘ಸಿಎಟಿ ಆದೇಶ ರದ್ದುಪಡಿಸಬೇಕು. ಅಲ್ಲದೆ, ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗಾವಣೆ ಮಾಡಿರುವ ಸರ್ಕಾರದ ಆದೇಶಕ್ಕೆ ತಡೆ ನೀಡಬೇಕು’ ಎಂಬುದು ಸಿಂಧೂರಿ ಅವರ ಕೋರಿಕೆ.

ರೋಹಿಣಿ ಸಿಂಧೂರಿ ಅವರನ್ನು ಸರ್ಕಾರ ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ಇತ್ತೀಚೆಗೆ ವರ್ಗಾಯಿಸಿತ್ತು. ಇದನ್ನು ಅವರು ಸಿಎಟಿಯಲ್ಲಿ ಪ್ರಶ್ನಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.