ADVERTISEMENT

ವಸತಿ ಶಾಲೆಯ 35 ವಿದ್ಯಾರ್ಥಿಗಳು ಅಸ್ವಸ್ಥ

​ಪ್ರಜಾವಾಣಿ ವಾರ್ತೆ
Published 19 ಜುಲೈ 2013, 19:59 IST
Last Updated 19 ಜುಲೈ 2013, 19:59 IST

ಅಥಣಿ:  ತಾಲ್ಲೂಕಿನ ಮುರಗುಂಡಿ ಗ್ರಾಮದ ಮೊರಾರ್ಜಿ ಮತ್ತು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಉಪಾಹಾರ ಸೇವಿಸಿದ 35ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ನಡೆದಿದೆ.

ಚಿತ್ರಾನ್ನ ಸೇವಿಸಿದ 475 ಮಕ್ಕಳಲ್ಲಿ ಸುಮಾರು 35 ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ವಿಷಾಹಾರ ಸೇವನೆಯಿಂದ ಹೀಗಾಗಿರಬಹುದೆಂದು ಡಾ. ಪುಷ್ಪಲತಾ ಸುಣ್ಣದಕಲ್ಲ ಮತ್ತು ಡಾ. ಜಗದೀಶ ನುಚ್ಚಿನ ಶಂಕೆ ವ್ಯಕ್ತಪಡಿಸಿದ್ದಾರೆ.

`ರಾತ್ರಿ ಉಳಿದ ಮತ್ತು ಬೆಳಿಗ್ಗೆ ತಯಾರಿಸಿದ ಅರೆ ಬೆಂದ ಅನ್ನವನ್ನು ಕೂಡಿಸಿ ತಯಾರಿಸಲಾಗಿದ್ದ ಚಿತ್ರಾನ್ನ ಸೇವಿಸಿದ ಮೇಲೆ ವಿದ್ಯಾರ್ಥಿಗಳಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಈ ಬಗ್ಗೆ ತಿಳಿಸಿದರೂ ನಿರ್ಲ ಕ್ಷಿಸಿದ್ದರಿಂದ ಮಕ್ಕಳು ನರಳುವಂತಾಯಿತು' ಎಂದು  ಪಾಲಕರು ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.