ADVERTISEMENT

ವಿಚಾರಣೆಗೆ ಪ್ರತ್ಯೇಕ ನ್ಯಾಯಪೀಠ

ಸರ್ಕಾರಿ ಜಮೀನು ಒತ್ತುವರಿ ತಕರಾರು

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2018, 19:30 IST
Last Updated 12 ಮಾರ್ಚ್ 2018, 19:30 IST

ಬೆಂಗಳೂರು: ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಲು ಹಾಗೂ ಒತ್ತುವರಿದಾರರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಚಿಸಲಾಗಿರುವ ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆಯನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಸಲ್ಲಿಸಲಾಗಿರುವ ನೂರಕ್ಕೂ ಅಧಿಕ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠ, ಬೇರೊಂದು ನ್ಯಾಯಪೀಠಕ್ಕೆ ವರ್ಗಾಯಿಸಿದೆ.

ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ಭೂ ಒತ್ತುವರಿ ಪ್ರಕರಣವೊಂದರ ವಿಚಾರಣೆ ನಡೆಸಬೇಕಿತ್ತು. ಆದರೆ, ನ್ಯಾಯಮೂರ್ತಿ ಶ್ಯಾಮ್ ಪ್ರಸಾದ್‌ ತಾವು ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯುತ್ತಿರುವುದಾಗಿ ತಿಳಿಸಿದರು.

ಇದರಿಂದ ದಿನೇಶ್ ಮಾಹೇಶ್ವರಿ, ‘ಈ ಕುರಿತಂತೆ ದಾಖಲಾಗಿರುವ ಎಲ್ಲ ಪ್ರಕರಣಗಳನ್ನೂ ಪ್ರತ್ಯೇಕ ನ್ಯಾಯಪೀಠ ವಿಚಾರಣೆ ನಡೆಸಲಿದೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.