ADVERTISEMENT

ವಿಟ್ಲ ಗಲಭೆ: 6 ಜನರ‌ ಬಂಧನ

​ಪ್ರಜಾವಾಣಿ ವಾರ್ತೆ
Published 21 ಮೇ 2018, 9:50 IST
Last Updated 21 ಮೇ 2018, 9:50 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮಂಗಳೂರು: ವಿಟ್ಲ ಸುತ್ತ ನಡೆದ ಗಲಾಟೆಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ.

ಮೊಹ್ಮದ್ ತಮೀಮ್, ಅಬ್ದುಲ್ ರಹಿಮಾನ್, ಮೊಹ್ಮದ್ ಝಕಾರಿಯಾ, ಸುಲೈಮಾನ್ ಒಕ್ಕೆತ್ತೂರು ಅವರನ್ನು ನಿಷೇಧಾಜ್ಞೆ ಉಲ್ಲಂಘಿಸಿದ ಹಾಗೂ ಗಲಾಟೆ ನಡೆಸಿದ ಆರೋಪದ ಮೇಲೆ‌ ಬಂಧಿಸಲಾಗಿದೆ.

ಕೋಮುಭಾವನೆ ಕೆರಳಿಸುವ ಸುಳ್ಳು ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಡಿದ ಕೆರಲೆ ಗ್ರಾಮದ ನಿತಿನ್ ಹಾಗೂ ಪಂಬೆಟ್ಟಾಡಿ ಗ್ರಾಮದ ದಿನೇಶ ಎಂಬುವವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಆರ್. ರವಿಕಾಂತೇಗೌಡ ತಿಳಿಸಿದ್ದಾರೆ. ಪರಿಸ್ಥಿತಿ ಶಾಂತವಾಗಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.

ADVERTISEMENT

ಸುಳ್ಳು ಸಂದೇಶ- ಕ್ರಮಕ್ಕೆ ಆಗ್ರಹ: ಕಾಂಗ್ರೆಸ್ ವಿಜಯೋತ್ಸವದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದೆ ಎಂಬ ಸುಳ್ಳು ವಿಡಿಯೊ ತುಣಕನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗುತ್ತಿದೆ. ಕೂಡಲೇ ಕ್ರಮ ಕೈಗೊಳ್ಳ ಬೇಕು ಎಂದು ಆಗ್ರಹಿಸಿ ಮಾಜಿ ಶಾಸಕ ಜೆ.ಆರ್. ಲೋಬೊ ನೇತೃತ್ವದ ಕಾಂಗ್ರೆಸ್ ನಿಯೋಗ ನಗರ ಪೊಲೀಸ್ ಆಯುಕ್ತ ವಿಪುಲಕುಮಾರ್ ಅವರಿಗೆ ಮನವಿ ಸಲ್ಲಿಸಿದೆ.

ಈ ಕುರಿತು ಈಗಾಗಲೇ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತಪ್ಪಿತಸ್ಥರನ್ನು ಶೀಘ್ರ ಬಂಧಿಸಬೇಕು ಎಂದು ಲೋಬೊ ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ವಿಪುಲಕುಮಾರ್, ಪ್ರಕರಣದ ಕುರಿತು ತನಿಖೆ ಆರಂಭಿಸಿದ್ದು, ಇಂತಹ ಸಂದೇಶ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.