
ಪ್ರಜಾವಾಣಿ ವಾರ್ತೆಬೆಂಗಳೂರು: ಬೆಳಗಾವಿಯಲ್ಲಿ ನಡೆಯುವ ವಿಶ್ವ ಕನ್ನಡ ಸಮ್ಮೇಳನಕ್ಕೆ ವಿಶೇಷಾಧಿಕಾರಿಯಾಗಿ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಐ.ಎಂ. ವಿಠಲಮೂರ್ತಿ ಅವರನ್ನು ನೇಮಕ ಮಾಡಲು ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಅಧಿಕೃತ ಆದೇಶ ಗುರುವಾರ ಹೊರಬೀಳಲಿದೆ. ಸಮ್ಮೇಳನವನ್ನು ಯಶಸ್ವಿಯಾಗಿ ಸಂಘಟಿಸುವ ಹಾಗೂ ಅದರ ಪೂರ್ವ ಸಿದ್ಧತೆಗಾಗಿ ಈ ನೇಮಕ ಮಾಡಿದ್ದು ಅವರಿಗೆ ಪೂರ್ಣ ಅಧಿಕಾರ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.