ADVERTISEMENT

ವಿದೇಶ ಪ್ರವಾಸ ಮುಂದೂಡಿ: ಸಿಎಂಗೆ ಬಿಎಸ್‌ವೈ ಸಲಹೆ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2012, 19:30 IST
Last Updated 11 ಏಪ್ರಿಲ್ 2012, 19:30 IST

ಬೀದರ್: ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರು ವಿದೇಶ ಪ್ರವಾಸವನ್ನು ರಾಜ್ಯದಲ್ಲಿ ಬರಗಾಲ ಉಂಟಾಗಿರುವುದರಿಂದ ಮುಂದೂಡುವುದು ಒಳಿತು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲಹೆ ಮಾಡಿದರು.

ಜಿಲ್ಲೆಯ ಔರಾದ್ ಮತ್ತು ಭಾಲ್ಕಿ ತಾಲ್ಲೂಕುಗಳಲ್ಲಿ ಬುಧವಾರ ಬರ ಪರಿಸ್ಥಿತಿಯ ಅಧ್ಯಯನ ನಡೆಸಿದ ನಂತರ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಆಹ್ವಾನ ನೀಡಲು ಮುಖ್ಯಮಂತ್ರಿಗಳು ವಿದೇಶ ಪ್ರವಾಸ ಕೈಗೊಳ್ಳಲಿದ್ದಾರೆ. ಸದ್ಯ ಬರ ಇರುವ ಕಾರಣಕ್ಕಾಗಿ ಅವರು ಪ್ರವಾಸ ಮುಂದೂಡುವುದು ಸೂಕ್ತ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.