ADVERTISEMENT

ವಿದ್ಯುತ್ ಸ್ಪರ್ಶ: ಹೆಣ್ಣಾನೆ ಸಾವು

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2011, 19:30 IST
Last Updated 23 ಸೆಪ್ಟೆಂಬರ್ 2011, 19:30 IST

ಚಾಮರಾಜನಗರ:  ವಿದ್ಯುತ್ ಸ್ಪರ್ಶದಿಂದ ಹೆಣ್ಣಾನೆಯೊಂದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಪುಣಜನೂರು ಅರಣ್ಯ ವಲಯದ ವೀರಯ್ಯನಪುರ ಗ್ರಾಮದಲ್ಲಿ ನಡೆದಿದೆ.

ಕೃಷ್ಣನಾಯ್ಕ ಎಂಬುವವರು ಕಬ್ಬಿನ ಬೆಳೆ ರಕ್ಷಿಸಲು ಜಮೀನಿನ ಸುತ್ತ ತಂತಿ ಬೇಲಿ ಅಳವಡಿಸಿದ್ದರು. ಆ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದರು. ಗುರುವಾರ ಬೆಳಿಗ್ಗೆ ಮೇವು ಹುಡುಕಿಕೊಂಡು ಬಂದ ಏಳು ವರ್ಷದ ಹೆಣ್ಣಾನೆ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದೆ. ಕೃಷ್ಣನಾಯ್ಕ ಅವರನ್ನು ಬಂಧಿಸಿ ನ್ಯಾಯಾಂಗದ ವಶಕ್ಕೆ ಒಪ್ಪಿಸಲಾಗಿದೆ. ಸ್ಥಳಕ್ಕೆ ಚಾಮರಾಜನಗರ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಎಸ್. ಶೇಖರ್, ಬಿಆರ್‌ಟಿ ಹುಲಿ ರಕ್ಷಿತಾರಣ್ಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಾಗರಾಜ್ ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.