ಬೆಂಗಳೂರು: ಕಳೆದ ಐದು ವರ್ಷಗಳಲ್ಲಿ ವಿಧಾನಸೌಧದಲ್ಲಿ ಇಲಿ ಮತ್ತು ಹೆಗ್ಗಣ ಹಿಡಿಯಲು ಸರ್ಕಾರ ಮಾಡಿರುವ ಖರ್ಚು ₹ 19.34 ಲಕ್ಷ.
ಜೆಡಿಎಸ್‌ನ ಪಟೇಲ್ ಶಿವರಾಂ ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಲಿಖಿತ ಉತ್ತರದಲ್ಲಿ ಈ ವಿವರ ಇದೆ. ಇಲಿಗಳಿಂದಾಗಿ ಕಡತ ಅಥವಾ ಯಾವುದೇ ಬೆಲೆಬಾಳುವ ವಸ್ತು ಹಾಳಾಗಿಲ್ಲ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ವಿಧಾನ ಸೌಧದಲ್ಲಿ ಇಲಿ ಹಿಡಿಯುವ ಗುತ್ತಿಗೆಯನ್ನು ಶ್ರೀ ಗಂಗಾ ಫೆಸಿಲಿಟಿ ಅಂಡ್ ಮ್ಯಾನೇಜ್‌ಮೆಂಟ್ ಸರ್ವಿಸ್ ಎಂಬ ಸಂಸ್ಥೆಗೆ ವಹಿಸಲಾಗಿದೆ. ಪ್ರತಿ ತಿಂಗಳು ಸರಾಸರಿ 50 ಇಲಿಗಳನ್ನು ವಿಧಾನಸೌಧದಲ್ಲಿ ಹಿಡಿಯಲಾಗುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.