ADVERTISEMENT

ವಿ.ಪಿ.ಬಳಿಗಾರ್ ಹುಡ್ಕೊ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2011, 19:30 IST
Last Updated 17 ಮಾರ್ಚ್ 2011, 19:30 IST

ಬೆಂಗಳೂರು: ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ.ಪಿ.ಬಳಿಗಾರ್ ಅವರು ನವದೆಹಲಿಯಲ್ಲಿನ ವಸತಿ ಮತ್ತು ನಗರಾಭಿವೃದ್ಧಿ ನಿಗಮದ (ಹುಡ್ಕೊ) ಅಧ್ಯಕ್ಷರಾಗಿ ನೇಮಕಗೊಂಡಿದ್ದು, ಸದ್ಯದಲ್ಲಿಯೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಮೂರು ವರ್ಷಗಳ ಅವಧಿಗೆ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡಿದ್ದು, ರಾಜ್ಯ ಸರ್ಕಾರ ಅವರನ್ನು ಸೇವೆಯಿಂದ ಬಿಡುಗಡೆಗೊಳಿಸಿದ ನಂತರ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವರ್ಗಾವಣೆ: ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಚಕ್ರವರ್ತಿ ಮೋಹನ್ ಅವರನ್ನು ರಾಮನಗರ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಿ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.