ಬೆಂಗಳೂರು: ಕರ್ನಾಟಕ ಲಲಿತಕಲಾ ಅಕಾಡೆಮಿಗೆ ಡಾ.ಎಂ.ಎಸ್. ಮೂರ್ತಿ ಅವರನ್ನು, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಗೆ ಬಿ.ಎ. ಮಹಮ್ಮದ್ ಹನೀಫ್ ಅವರನ್ನು ಅಧ್ಯಕ್ಷರನ್ನಾಗಿ ಪುನಃ ನೇಮಕ ಮಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬುಧವಾರ ಆದೇಶ ಹೊರಡಿಸಿದೆ.
ಇವರ ನೇಮಕ ರದ್ದು ಮಾಡಿ ಜೂನ್‌ನಲ್ಲಿ ಇಲಾಖೆ ಆದೇಶಿಸಿತ್ತು. ಈ ಅಕಾಡೆಮಿಗಳ ಅಧ್ಯಕ್ಷರ ನೇಮಕ ವಿವಾದ ನ್ಯಾಯಾಲಯದಲ್ಲಿ ಇರುವ ಕಾರಣ, ನೇಮಕಾತಿಯನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ ಎಂದು ಅಧಿಕಾರಿಗಳು ಆಗ ತಿಳಿಸಿದ್ದರು. ಈ ಎರಡು ಅಕಾಡೆಮಿಗಳಿಗೆ ಜೂನ್‌ಗಿಂತ ಮೊದಲಿದ್ದ ಸದಸ್ಯರನ್ನೇ ಪುನಃ ನೇಮಕ ಮಾಡಲಾಗಿದೆ.
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರನ್ನಾಗಿ ಬಿದ್ದಾಟಂಡ ಎಸ್. ತಮ್ಮಯ್ಯ ಅವರನ್ನು, ಅರೆಭಾಷೆ ಸಂಸ್ಕೃತಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರನ್ನಾಗಿ ಮಡಿಕೇರಿಯ ಕೊಲ್ಯದ ಗಿರೀಶ್ ಅವರನ್ನು ನೇಮಿಸಲಾಗಿದೆ. ಇದೇ ವೇಳೆ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಸದಸ್ಯರನ್ನಾಗಿ ವಿಮರ್ಶಕ ಎಚ್.ಎಸ್. ರಾಘವೇಂದ್ರ ರಾವ್ ಅವರನ್ನು ನೇಮಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.