ADVERTISEMENT

ವಿಶೇಷ ಕೋಟಾ: ದಾಖಲೆ ಪರಿಶೀಲನೆ ಆರಂಭ

​ಪ್ರಜಾವಾಣಿ ವಾರ್ತೆ
Published 3 ಜೂನ್ 2013, 19:59 IST
Last Updated 3 ಜೂನ್ 2013, 19:59 IST

ಬೆಂಗಳೂರು: ವಿಶೇಷ ಕೋಟಾದಡಿ ವೈದ್ಯಕೀಯ/ದಂತ ವೈದ್ಯಕೀಯ, ಎಂಜಿನಿಯರಿಂಗ್ ಮತ್ತಿತರ ಕೋರ್ಸ್‌ಗಳಿಗೆ ಪ್ರವೇಶ ಬಯಸಿರುವ ಎನ್‌ಸಿಸಿ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಮತ್ತು ಅಂಗವಿಕಲ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆ ಸೋಮವಾರ ನಡೆಯಿತು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಎನ್‌ಸಿಸಿ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಗೆ ಒಟ್ಟು 413 ಮಂದಿ ಹಾಜರಾಗಿದ್ದರು. ಈ ಪೈಕಿ 394 ಮಂದಿ ಅರ್ಹರಾಗಿದ್ದಾರೆ. ವೈದ್ಯಕೀಯ ಪರೀಕ್ಷೆಗೆ 186 ಮಂದಿ ಹಾಜರಾಗಿದ್ದರು. ಈ ಪೈಕಿ 125 ಮಂದಿ ಸೀಟು ಆಯ್ಕೆಗೆ ಅರ್ಹರಾಗಿದ್ದಾರೆ ಎಂದು ಪ್ರಾಧಿಕಾರದ ಪ್ರಕಟಣೆಗೆ ತಿಳಿಸಿದೆ.

ಈಗಾಗಲೇ ನಿಗದಿಯಾಗಿರುವಂತೆ ಮಂಗಳವಾರ ಕ್ರೀಡಾ ಕೋಟಾದ ಅಡಿ ಪ್ರವೇಶ ಬಯಸಿರುವ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ನಡೆಯಲಿದೆ. ಜೂನ್ 5ರಿಂದ ಸಾಮಾನ್ಯ ಮತ್ತು ಮೀಸಲು ವರ್ಗದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಆರಂಭವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.