ADVERTISEMENT

ವಿಶ್ವಾಸಮತ ಸಿಕ್ಕೇ ಸಿಗುತ್ತೆ, ಯಡಿಯೂರಪ್ಪನವರೇ ಮುಖ್ಯಮಂತ್ರಿ: ಕೆ.ಎಸ್‌. ಈಶ್ವರಪ್ಪ ವಿಶ್ವಾಸ

​ಪ್ರಜಾವಾಣಿ ವಾರ್ತೆ
Published 18 ಮೇ 2018, 9:24 IST
Last Updated 18 ಮೇ 2018, 9:24 IST
ಕೆ.ಎಸ್‌. ಈಶ್ವರಪ್ಪ
ಕೆ.ಎಸ್‌. ಈಶ್ವರಪ್ಪ   

ಶಿವಮೊಗ್ಗ: ‘ನಮ್ಮ ಸರ್ಕಾರಕ್ಕೆ ವಿಶ್ವಾಸಮತ ಸಿಕ್ಕೀ ಸಿಗುತ್ತದೆ. ಬಿ.ಎಸ್‌. ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ’ ಎಂದು ಬಿಜೆಪಿ ಮುಖಂಡ ಕೆ. ಎಸ್‌. ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

‘ಪ್ರಮಾಣ ವಚನ ಸಮಾರಂಭಕ್ಕೆ ಅವಕಾಶ ನೀಡಕೂಡದು’ ಎಂದು ಕೋರಿ ಕಾಂಗ್ರೆಸ್‌–ಜೆಡಿಎಸ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಶುಕ್ರವಾರ ಬೆಳಿಗ್ಗೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್‌, ನಾಳೆ(ಶನಿವಾರ) ಸಂಜೆ 4ಕ್ಕೆ ಬಹುಮತ ಸಾಬೀತುಪಡಿಸುವಂತೆ ಆದೇಶ ನೀಡಿದೆ.

ಸುಪ್ರೀಂಕೋರ್ಟ್ ಆದೇಶ ಪ್ರಕಟಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್‌.ಈಶ್ವರಪ್ಪ ಅವರು, ‘ಕಾಂಗ್ರೆಸ್ ಬೆಂಬಲದೊಂದಿಗೆ ಜೆಡಿಎಸ್‌ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದೆ. ಇದಕ್ಕೆ ಕಾಂಗ್ರೆಸ್‌ನ ಹಲವು ಶಾಸಕರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ’ ಎಂದು ತಿಳಿಸಿದರು.

ADVERTISEMENT

ಶಾಸಕರಿಗೆ ‘ವಿಪ್ ಜಾರಿ’, ‘ಗೈರು ಹಾಜರಿ’‌ ಇತ್ಯಾದಿ ತಂತ್ರಗಳು ಇವೆ.‌ ಯಾವುದೋ ಒಂದು ತಂತ್ರ ಸಫಲವಾಗಲಿದ್ದು, ನಮ್ಮ ಸರ್ಕಾರಕ್ಕೆ ಬಹುಮತ ಸಿಗಲಿದೆ ಎಂದರು.

ಇದೇ ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಹಲವು ಶಾಸಕರು ನಮ್ಮ ಸಂಪರ್ಕದಲ್ಲಿ ಇರುವುದಾಗಿ ತಿಳಿಸಿದರು. 

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.