ಬೆಂಗಳೂರು: ಚಿತ್ರ ನಟ ವಿಷ್ಣುವರ್ಧನ್ ಸಮಾಧಿ ಸ್ಥಳವನ್ನು ಅಭಿವೃದ್ಧಿಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಚಿತ್ರ ನಟ ಸುದೀಪ್ ಸೋಮವಾರ ಈ ಸಂಬಂಧ ಮುಖ್ಯಮಂತ್ರಿ ಜತೆ ಮಾತನಾಡಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿ, ವಿಷ್ಣುವರ್ಧನ್ ಸಮಾಧಿ ಸ್ಥಳವನ್ನು ಪುಣ್ಯಭೂಮಿಯಾಗಿ ಅಭಿವೃದ್ಧಿಪಡಿಸಬೇಕು. ಸಮಾಧಿ ಸ್ಥಳವನ್ನು ಯಾವುದೇ ಕಾರಣಕ್ಕೂ ಸ್ಥಳಾಂತರಿಸಬಾರದು ಎಂದು ಮನವಿ ಮಾಡಿರುವುದಾಗಿ ತಿಳಿಸಿದರು.
‘ನಮ್ಮ ಬೇಡಿಕೆಗೆ ಮುಖ್ಯಮಂತ್ರಿಯವರು ಸಕಾರಾತ್ಮಕವಾಗಿ ಸ್ಪಂದಿಸಿದರು’ ಎಂದು ಸುದೀಪ್ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.