ADVERTISEMENT

ವೀರಶೈವ ಲಿಂಗಾಯತ ಎರಡೂ ಒಂದೇ: ಶಾಮನೂರು ಶಿವಶಂಕರಪ್ಪ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2018, 8:31 IST
Last Updated 11 ಮಾರ್ಚ್ 2018, 8:31 IST
ವೀರಶೈವ ಲಿಂಗಾಯತ ಎರಡೂ ಒಂದೇ: ಶಾಮನೂರು ಶಿವಶಂಕರಪ್ಪ
ವೀರಶೈವ ಲಿಂಗಾಯತ ಎರಡೂ ಒಂದೇ: ಶಾಮನೂರು ಶಿವಶಂಕರಪ್ಪ   

ತುಮಕೂರು: ವೀರಶೈವ ಮಹಾಸಭಾ ಯಾವುದೇ ಪಕ್ಷಕ್ಕೂ ಸೇರಿಲ್ಲ. ಮಹಾಸಭೆ ಸ್ವತಂತ್ರ ನಿರ್ಣಯ ತೆಗೆದುಕೊಳ್ಳುತ್ತದೆ. ವೀರಶೈವ ಲಿಂಗಾಯತ ಎರಡೂ ಒಂದೇ ಎನ್ನುವುದೇ ನಮ್ಮ ಸ್ಪಷ್ಟ ಅಭಿಪ್ರಾಯ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದರು.

ಇಲ್ಲಿ ಭಾನುವಾರ ನಡೆಯುತ್ತಿರುವ ವೀರಶೈವ ಲಿಂಗಾಯತ ನೌಕರರ ಸಮಾವೇಶದಲ್ಲಿ ಮಾತನಾಡಿದರು.

ಯಾರೇ ಮುಖ್ಯಮಂತ್ರಿ ಆದರೂ ನೌಕರರ ವಿಚಾರವಾಗಿ ತಾರತಮ್ಯ ಮಾಡದೆ ಸಮಾನವಾಗಿ ಕಾಣಬೇಕು. ಆದರೆ ಇತ್ತೀಚಿನ ವರ್ಷಗಳಲ್ಲಿ ಈ ರೀತಿ ಆಗುತ್ತಿಲ್ಲ. ತಮ್ಮ ಸಮುದಾಯದ ನೌಕರರಿಗೆ ಮಾತ್ರ ಮನ್ನಣೆ ನೀಡುತ್ತಿದ್ದಾರೆ ಎಂದರು.

ADVERTISEMENT

‘ರಾಜ್ಯದಲ್ಲಿ ವೀರಶೈವ ಲಿಂಗಾಯತ ನೌಕರರ ಸ್ಥಿತಿ ಶೋಚನೀಯವಾಗಿದೆ. ಸಮುದಾಯದ ಉನ್ನತ ಅಧಿಕಾರಿಗಳನ್ನು ಆಯಕಟ್ಟಿನ ಹುದ್ದೆಗಳಿಗೆ ನೇಮಿಸಿಲ್ಲ. ಅಲ್ಲದೆ ಸಮಾಜದ ಛಿದ್ರ ಮಾಡಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ. ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹಾಗೂ ವೀರಶೈವ ಲಿಂಗಾಯತರ ಪರಮೋಚ್ಚ ಗುರುಗಳಾದ ಸಿದ್ದಗಂಗಾ ಶ್ರೀಗಳು ವೀರಶೈವ ಲಿಂಗಾಯತ ಒಂದೇ ಎಂದು ಹೇಳಿದರೂ ಕೇಳದೆ ಸಮಾಜವನ್ನು ಒಡೆದಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.