ADVERTISEMENT

ವೃದ್ಧೆ ಮೇಲೆ ಅತ್ಯಾಚಾರ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2013, 19:30 IST
Last Updated 16 ಡಿಸೆಂಬರ್ 2013, 19:30 IST

ಮಳವಳ್ಳಿ: ಪಾರ್ಶ್ವವಾಯು ಪೀಡಿತ 61 ವರ್ಷದ ವೃದ್ಧೆ ಮೇಲೆ ಅಂಗ ವಿಕಲ ಯುವಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ತಾಲ್ಲೂಕಿನ ನೆಲಮಾಕನಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಗ್ರಾಮದ ದಿ. ಸುಬ್ಬೇಗೌಡರ ಮಗ ಮಹೇಶ್ ಅಲಿಯಾಸ್ ಮಾದಪ್ಪ (27) ಎಂಬಾತ ಈ ದುಷ್ಕೃತ್ಯ ಎಸಗಿದ್ದಾನೆ.

ವೃದ್ಧೆ ಬಹಿರ್ದೆಸೆಗೆ ಹೋಗುವಾಗ ಮಹೇಶ್ ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿರುವುದಾಗಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.