ADVERTISEMENT

ವೇತನಾನುದಾನ: 9ಕ್ಕೆ ಸಿಎಂ ಉತ್ತರ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2012, 19:30 IST
Last Updated 2 ಫೆಬ್ರುವರಿ 2012, 19:30 IST

ಬೆಂಗಳೂರು: 1994-95ರವರೆಗೆ ಆರಂಭವಾದ ಶಾಶ್ವತ ಅನುದಾನರಹಿತ ಶಿಕ್ಷಣ ಸಂಸ್ಥೆಗಳಿಗೆ ವೇತನಾನುದಾನ ನೀಡಲು ಸರ್ಕಾರ ಬದ್ಧವಾಗಿದೆ. ಈ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಹಣಕಾಸು ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಿ ಇದೇ 9ರಂದು ಉತ್ತರ ನೀಡುವುದಾಗಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ವಿಧಾನ ಪರಿಷತ್ತಿನಲ್ಲಿ ಗುರುವಾರ ಪ್ರಕಟಿಸಿದರು.

ಜೆಡಿಎಎಸ್‌ನ ಬಸವರಾಜ ಹೊರಟ್ಟಿ ಅವರು ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, `1991-95ರ ನಡುವೆ ಆರಂಭವಾದ 1,250 ಶಾಶ್ವತ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ ವೇತನಾನುದಾನ ನೀಡಲು 169 ಕೋಟಿ ರೂಪಾಯಿ ಬೇಕು. ಈ ನಿಟ್ಟಿನಲ್ಲಿ ಈಗಾಗಲೇ 65 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಇನ್ನುಳಿದ ಮೊತ್ತವನ್ನು ಹಂತ ಹಂತವಾಗಿ ಬಿಡುಗಡೆ ಮಾಡಲಾಗುವುದು~ ಎಂದರು.

ತೃಪ್ತರಾಗದ ಜೆಡಿಎಸ್‌ನ ಪುಟ್ಟಣ್ಣ, ಮರಿತಿಬ್ಬೇಗೌಡ ಮತ್ತು ರಾಮಕೃಷ್ಣ ಅವರು `ಸರ್ಕಾರ ಹಣ ಬಿಡುಗಡೆ ಮಾಡುವವರೆಗೂ ಧರಣಿ ನಡೆಸುತ್ತೇವೆ~ ಎಂದು ಸಭಾಪತಿಗಳ ಎದುರಿನ ಅಂಗಳಕ್ಕೆ ಬಂದರು. ನಂತರ ವೀರಣ್ಣ ಮತ್ತಿಕಟ್ಟಿ ಮೋಟಮ್ಮ ಮನವಿಯ ಮೇರೆಗೆ ಧರಣಿ ಕೈಬಿಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.