ADVERTISEMENT

ವೇತನ ಸ್ಥಗಿತ: ಖಂಡನೆ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2012, 19:30 IST
Last Updated 9 ಅಕ್ಟೋಬರ್ 2012, 19:30 IST

ಬೆಂಗಳೂರು: ಪಶುಸಂಗೋಪನಾ ಇಲಾಖೆಯ ಮುಷ್ಕರನಿರತ ಅಧಿಕಾರಿಗಳು ಮತ್ತು ಸಿಬ್ಬಂದಿಯ ವೇತನ ಹಾಗೂ ಇತರೆ ಭತ್ಯೆಗಳನ್ನು ತಡೆಹಿಡಿಯುವಂತೆ ಹೊರಡಿಸಲಾದ ಸುತ್ತೋಲೆಯನ್ನು ಕೂಡಲೇ ಹಿಂಪಡೆಯದಿದ್ದರೆ ಅಗತ್ಯ ಸೇವೆಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ಪಶುವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಟಿ.ಶ್ರೀನಿವಾಸ ರೆಡ್ಡಿ ಎಚ್ಚರಿಕೆನೀಡಿದ್ದಾರೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ಸರ್ಕಾರದ ವಿಳಂಬ ನೀತಿಯನ್ನು ಖಂಡಿಸಿ ಪ್ರಗತಿ ವರದಿಗಳನ್ನು ಸಲ್ಲಿಸದೇ ಇರುವುದು ಮತ್ತು ಪಶುಗಣತಿ ಕಾರ್ಯದಲ್ಲಿ ತೊಡಗಿಕೊಳ್ಳದೇ ಇರುವುದನ್ನೇ ಕಾರಣವಾಗಿಟ್ಟುಕೊಂಡು ಸಿಬ್ಬಂದಿಯ ವೇತನ ತಡೆಹಿಡಿಯುವಂತೆ ಆದೇಶ ಹೊರಡಿಸಲಾಗಿದೆ. ಈ ಕ್ರಮ ಸರಿಯಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.