ADVERTISEMENT

ವೈಜ್ಞಾನಿಕ ನಕ್ಷೆ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2012, 19:30 IST
Last Updated 25 ಫೆಬ್ರುವರಿ 2012, 19:30 IST

ಬೆಂಗಳೂರು: ರಾಜ್ಯದ ನಗರ ಪ್ರದೇಶಗಳ ವೈಜ್ಞಾನಿಕ ನಕ್ಷೆ ತಯಾರಿ ಕುರಿತ ಮಾರ್ಗಸೂಚಿ ಕೈಪಿಡಿ ಸಿದ್ಧವಾಗಿದ್ದು, ಮೊದಲ ಹಂತದಲ್ಲಿ 11 ನಗರಗಳ ನಕ್ಷೆ ಲಭ್ಯವಾಗಲಿದೆ ಎಂದು ನಗರಾಭಿವೃದ್ಧಿ ಸಚಿವ ಸುರೇಶಕುಮಾರ್ ತಿಳಿಸಿದರು.

ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆಯ (ಕೆಯುಐಡಿಎಫ್‌ಸಿ) ಪ್ರಗತಿ ಪರಿಶೀಲನೆ ನಡೆಸಿದ ನಂತರ ಸಚಿವರು ಈ ವಿಷಯ ಪ್ರಕಟಿಸಿದರು. ಒಂದೂವರೆ ವರ್ಷದಲ್ಲಿ ಈ ನಕ್ಷೆ ಲಭ್ಯವಾಗಲಿದೆ.

ಕೆಯುಐಡಿಎಫ್‌ಸಿ ಕೈಗೆತ್ತಿಕೊಂಡಿದ್ದ ರಾಜ್ಯದ 164 ಸ್ಥಳೀಯ ಸಂಸ್ಥೆಗಳ ವೆಬ್‌ಸೈಟ್ ಅಭಿವೃದ್ಧಿ ಕಾರ್ಯ ಪೂರ್ಣಗೊಂಡಿದೆ ಎಂದು ಹೇಳಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.