ADVERTISEMENT

ಶಮೀಂಗೆ ಜಾಮೀನು

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2013, 19:59 IST
Last Updated 16 ಸೆಪ್ಟೆಂಬರ್ 2013, 19:59 IST

ಬೆಂಗಳೂರು: ಅಕ್ರಮ ಗಣಿಗಾರಿಕೆಗೆ ಸಹಕರಿಸಿದ ಆರೋಪದಲ್ಲಿ ನ್ಯಾಯಾಂಗ  ಬಂಧನದಲ್ಲಿ ಇರುವ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಮೀಂ ಬಾನು ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಸೋಮವಾರ ಷರತ್ತಿನ ಜಾಮೀನು ಮಂಜೂರು ಮಾಡಿದೆ.

ಶಮೀಂ ಬಾನು ಮಹಿಳೆ ಮತ್ತು ಅವರಿಗೆ ವಯಸ್ಸಾಗಿರುವ ಕಾರಣಕ್ಕೆ ಜಾಮೀನು ಮಂಜೂರು ಮಾಡಬೇಕು ಎಂಬ ಆರೋಪಿ ಪರ ವಕೀಲರ ವಾದವನ್ನು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ
ವಿ. ಶ್ರೀಶಾನಂದ ಮಾನ್ಯ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.