ADVERTISEMENT

ಶರಣರು ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 15 ಜೂನ್ 2018, 19:30 IST
Last Updated 15 ಜೂನ್ 2018, 19:30 IST
ಡಾ.ಶಿವಮೂರ್ತಿ ಮುರುಘಾ ಶರಣರು
ಡಾ.ಶಿವಮೂರ್ತಿ ಮುರುಘಾ ಶರಣರು   

ಚಿತ್ರದುರ್ಗ: ಇಲ್ಲಿನ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಬೆಂಗಳೂರಿನ ಬಿಜೆಎಸ್ ಆಸ್ಪತ್ರೆಗೆ ಮತ್ತೆ ದಾಖಲಾಗಿದ್ದಾರೆ.

ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಜೂನ್‌ 11ರಂದು ಚಿತ್ರದುರ್ಗದ ಮಠಕ್ಕೆ ಮರಳಿದ್ದರು. ಉಸಿರಾಟದ ಸಮಸ್ಯೆ ಮತ್ತೆ ಕಾಣಿಸಿ
ಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಬದಲಾದ ವಾತಾವರಣದಿಂದ ಶರಣರ ಆರೋಗ್ಯ ಹದಗಟ್ಟಿತ್ತು. ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಆರೋಗ್ಯವಾಗಿದ್ದಾರೆ. ಆಸ್ಪತ್ರೆಯಿಂದ ಶನಿವಾರ ಮಠಕ್ಕೆ ಮರಳಲಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.