ADVERTISEMENT

ಶರತ್‌ ಮಡಿವಾಳ ಶವ ಕುಟುಂಬಕ್ಕೆ ಹಸ್ತಾಂತರ; ಭಾರೀ ಪೊಲೀಸ್‌ ಭದ್ರತೆ

​ಪ್ರಜಾವಾಣಿ ವಾರ್ತೆ
Published 8 ಜುಲೈ 2017, 5:57 IST
Last Updated 8 ಜುಲೈ 2017, 5:57 IST
ಆರ್‌ಎಸ್‌ಎಸ್ ಕಾರ್ಯಕರ್ತ ಶರತ್‌ ಮಡಿವಾಳ ಅವರ ಮೃತದೇಹವನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು.
ಆರ್‌ಎಸ್‌ಎಸ್ ಕಾರ್ಯಕರ್ತ ಶರತ್‌ ಮಡಿವಾಳ ಅವರ ಮೃತದೇಹವನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು.   

ಮಂಗಳೂರು: ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್‌ನಲ್ಲಿ ಇದೇ 4ರಂದು ಹಲ್ಲೆಗೊಳಗಾಗಿ, ಶುಕ್ರವಾರ ಸಂಜೆ ನಗರದ ಎ.ಜೆ.ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಆರ್‌ಎಸ್‌ಎಸ್ ಕಾರ್ಯಕರ್ತ ಶರತ್‌ ಮಡಿವಾಳ (28) ಅವರ ಮೃತದೇಹವನ್ನು ಅವರ ಕುಟುಂಬಕ್ಕೆ ಶನಿವಾರ ಬೆಳಿಗ್ಗೆ ಹಸ್ತಾಂತರಿಸಲಾಯಿತು.

ಎಜೆ ಆಸ್ಪತ್ರೆಯ ಶವಾಗಾರದಲ್ಲಿದ್ದ ಮೃತದೇಹವನ್ನು ಭಾರೀ ಪೊಲೀಸ್‌ ಭದ್ರತೆಯೊಂದಿಗೆ ಹಸ್ತಾಂತರ ಮಾಡಲಾಯಿತು. ಶವವನ್ನು ಶರತ್‌ ಅವರ ಸ್ವಗ್ರಾಮಕ್ಕೆ 25 ಪೊಲೀಸ್‌ ವಾಹನಗಳ ಬೆಂಗಾವಲಿನಲ್ಲಿ ತೆಗೆದುಕೊಂಡು ಹೋಗಲಾಗುತ್ತಿದೆ.

ಶವ ಹಸ್ತಾಂತರಕ್ಕೂ ಮುನ್ನ ಆರ್‌ಎಸ್‌ಎಸ್‌ ಕಾರ್ಯಕರ್ತರು ಬೆಳಿಗ್ಗೆ 8ರಿಂದಲೇ ಆಸ್ಪತ್ರೆ ಆವರಣಕ್ಕೆ ತಂಡೋಪ ತಂಡವಾಗಿ ಆಗಮಿಸಿದ್ದರು.  ಶವನ್ನು ಮೆರವಣಿಗೆಯಲ್ಲಿ ತೆಗೆದುಕೊಂಡು ಹೋಗಲು ಸಿದ್ಧತೆ ನಡೆಸಿದ್ದರು.

ADVERTISEMENT

ಬಂಟ್ವಾಳ, ಬಿಸಿ ರಸ್ತೆ ಹಾಗೂ ಶರತ್‌ ಅವರ ಗ್ರಾಮದಲ್ಲಿ ವಾತಾವರಣ ಬಿಗುವಿನಿಂದ ಕೂಡಿದೆ.

ಕಪ್ಪು ಭಾವುಟ

ಶರತ್‌ ಅವರ ಮೃತದೇಹವನ್ನು ಹೊತ್ತು ಸಾಗುತ್ತಿರುವ ವಾಹನದ ಹಿಂದೆ ನೂರಾರು ಮಂದಿ ಸಂಘ ಪರಿವಾರದ ಕಾರ್ಯಕರ್ತರು ಕಪ್ಪು ಭಾವುಟ ಹಿಡಿದು ಬೈಕ್‌ಗಳಲ್ಲಿ ಸಾಗುತ್ತಿದ್ದಾರೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.