ADVERTISEMENT

ಶಾಖೋತ್ಪನ್ನ ಘಟಕಗಳಿಗೆ ಕಲ್ಲಿದ್ದಲು ಕೇಂದ್ರಕ್ಕೆ ಮನವಿ: ಕರಂದ್ಲಾಜೆ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2011, 16:45 IST
Last Updated 26 ಫೆಬ್ರುವರಿ 2011, 16:45 IST

ಬಳ್ಳಾರಿ:  ರಾಜ್ಯ ಎದುರಿಸುತ್ತಿರುವ ವಿದ್ಯುತ್ ಕೊರತೆಯನ್ನು ನೀಗಿಸಿ, ಸ್ವಾವಲಂಬನೆ ಸಾಧಿಸುವ ಉದ್ದೇಶದಿಂದ ಸ್ಥಾಪಿಸಲು ಉದ್ದೇಶಿಸಲಾಗಿರುವ ಶಾಖೋತ್ಪನ್ನ ಘಟಕಗಳಿಗೆ ಕಲ್ಲಿದ್ದಲು ಪೂರೈಸಲು ಕೇಂದ್ರ ಸರಕಾರ ಅಂತಿಮ ನಿರ್ಧಾರ ಕೈಗೊಳ್ಳಬೇಕಿದೆ ಎಂದು ಇಂಧನ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ತಾಲ್ಲೂಕಿನ ಕುಡುತಿನಿ ಬಳಿಯ ಬಳ್ಳಾರಿ ಶಾಖೋತ್ಪನ್ನ ಘಟಕಕ್ಕೆ (ಬಿಟಿಪಿಎಸ್) ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾರ್ಖಂಡ್ ಹಾಗೂ ರಾಜ್ಯದ ವಿವಿಧೆಡೆ ನೂತನವಾಗಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಶಾಖೋತ್ಪನ್ನ ಘಟಕಗಳಿಗೆ ಅಗತ್ಯ ಕಲ್ಲಿದ್ದಲು ಪೂರೈಕೆಗೆ  ಅನುಮತಿಯನ್ನು ನೀಡುವಂತೆ ಕೇಂದ್ರ ಸಚಿವರಾದ ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯ್ಲಿ, ಕೆ.ಎಚ್. ಮುನಿಯಪ್ಪ ಅವರ ಮೂಲಕ ಮನವಿ ಸಲ್ಲಿಸಲಾಗಿದೆ.

ಕೇಂದ್ರ ಸರಕಾರ ವಿಳಂಬ ಮಾಡದೆ ಶೀಘ್ರವೇ ಅನುಮತಿ ನೀಡುವಲ್ಲಿ ಮುಂದಾಗಬೇಕಿದೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.