ADVERTISEMENT

ಶಾಲಾ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2013, 19:59 IST
Last Updated 1 ಸೆಪ್ಟೆಂಬರ್ 2013, 19:59 IST

ಚಿಕ್ಕಮಗಳೂರು: ನಗರದ ಪ್ರತಿಷ್ಠಿತ ಶಾಲೆಯೊಂದರ 7ನೇ ತರಗತಿಯ ವಿದ್ಯಾರ್ಥಿಯನ್ನು ಇಬ್ಬರು ಅಪರಿಚಿತರು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ನಗರ ಹೊರವಲಯದ ರತ್ನಗಿರಿ ಜೈಲು ಸಮೀಪ ನಡೆದಿದೆ.

ಬಾಲಕನನ್ನು ಆತನ ತಂದೆ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ.

ಜಿಲ್ಲಾ ಆಸ್ಪತ್ರೆ ವೈದ್ಯರು ಬಾಲಕನಿಗೆ ಚಿಕಿತ್ಸೆ ನೀಡಿ, ಶುಶ್ರೂಷೆ ಮಾಡುತ್ತಿದ್ದಾರೆ. ಬಾಲಕನು ಶನಿವಾರ ಶಾಲೆ ಬಿಟ್ಟ ಬಳಿಕ ಮನೆಗೆ ಮರಳುತ್ತಿದ್ದ ಬಾಲಕನನ್ನು ಇಬ್ಬರು ಯುವಕರು ಆತನ ಬಾಯಿ ಮುಚ್ಚಿಕೊಂಡು ಜೈಲು ಗೋಡೆ ಸಮೀಪ ನಿರ್ಜನ ಪ್ರದೇಶಕ್ಕೆ ಹೊತ್ತೊಯ್ದು ಈ ಕೃತ್ಯ ಎಸಗಿ ಪರಾರಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಾಲಕನ ತಂದೆ ಬಸವನಹಳ್ಳಿ ಠಾಣೆಗೆ ಭಾನುವಾರ ದೂರು ನೀಡಿದ್ದಾರೆ.

ಆರೋಪಿಗಳ ವಿರುದ್ಧ ಪೊಲೀಸರು ಐಪಿಸಿ 377, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟುವಿಕೆ ಕಾಯ್ದೆ ಸೆಕ್ಷನ್ 3 ಮತ್ತು 4ರಡಿ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳಿಗೆ ಶೋಧ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.