ADVERTISEMENT

ಶಾಲಿನಿ ರಜನೀಶ್ ದಿಢೀರ್‌ ಎತ್ತಂಗಡಿ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2017, 19:30 IST
Last Updated 10 ಅಕ್ಟೋಬರ್ 2017, 19:30 IST
ಶಾಲಿನಿ ರಜನೀಶ್ ದಿಢೀರ್‌ ಎತ್ತಂಗಡಿ
ಶಾಲಿನಿ ರಜನೀಶ್ ದಿಢೀರ್‌ ಎತ್ತಂಗಡಿ   

ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ವಿವಿಧ ಉಪಕರಣಗಳ ಖರೀದಿ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘಿಸಿರುವ ಆರೋಪ ಎದುರಾದ ಬೆನ್ನಲ್ಲೇ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ದಿಢೀರ್ ಎತ್ತಂಗಡಿ ಮಾಡಲಾಗಿದೆ.

ಇಲಾಖೆಯಲ್ಲಿ ನಿಯಮಬಾಹಿರವಾಗಿ ಟೆಂಡರ್ ಪ್ರಕ್ರಿಯೆ ನಡೆಸಿರುವ ಬಗ್ಗೆ ‘ಪ್ರಜಾವಾಣಿ’ ಸರಣಿ ವರದಿಗಳನ್ನು ಪ್ರಕಟಿಸಿತ್ತು. ಆರೋಗ್ಯ ಇಲಾಖೆಯಲ್ಲೇ ಉಳಿದುಕೊಳ್ಳಲು ಶಾಲಿನಿ ಪ್ರಯತ್ನಿಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.

ಇವರಲ್ಲದೆ, ಇನ್ನೂ ಒಂಬತ್ತು ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ADVERTISEMENT

ಇಂಧನ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿದ್ದ ರಜನೀಶ್ ಗೋಯಲ್ ಅವರನ್ನು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಗೆ ವರ್ಗಾಯಿಸಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಅಜಯ್ ಸೇಟ್ ಅವರಿಗೆ ಆರೋಗ್ಯ ಇಲಾಖೆಯಲ್ಲಿ ಅದೇ ಹುದ್ದೆಯ ಜವಾಬ್ದಾರಿ ವಹಿಸಲಾಗಿದೆ.

ಇಂಧನ ಇಲಾಖೆಯಲ್ಲಿ ಹಿಂದೆ ಕೆಲಸ ನಿರ್ವಹಿಸಿ, ಅರಣ್ಯ ಇಲಾಖೆಗೆ ವರ್ಗಾವಣೆ ಮಾಡಲಾಗಿದ್ದಪಿ. ರವಿಕುಮಾರ್ ಅವರನ್ನು ಮತ್ತೆ ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಹುದ್ದೆಗೆ ವರ್ಗ ಮಾಡಲಾಗಿದೆ.

ಋತ್ವಿಕ್ ರಂಜನ್ ಪಾಂಡೆ–ಕಾರ್ಯದರ್ಶಿ, ಹಣಕಾಸು ಇಲಾಖೆ(ಬಜೆಟ್ ಮತ್ತು ಸಂಪನ್ಮೂಲ).

ಎಂ.ಎಸ್. ಶ್ರೀಕರ–ಆಯುಕ್ತ, ವಾಣಿಜ್ಯ ತೆರಿಗೆ.

ಕೆ.ಜಿ. ಜಗದೀಶ್–ನಿರ್ದೇಶಕ, ಗಣಿ ಮತ್ತು ಭೂವಿಜ್ಞಾನ ಇಲಾಖೆ.

ಜಿ.ಸಿ. ಪ್ರಕಾಶ್– ವ್ಯವಸ್ಥಾಪಕ ನಿರ್ದೇಶಕ, ಮೈಸೂರು ಸೇಲ್ಸ್‌ ಅಂಡ್‌ ಇಂಟರ್ ನ್ಯಾಷನಲ್ ಲಿಮಿಟೆಡ್‌, ಆಯುಕ್ತ, ಕಬ್ಬು ಅಭಿವೃದ್ಧಿ.

ಶಶಿಕಾಂತ್ ಸೆಂಥಿಲ್–ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆ.

ಕೆ.ಎಸ್. ಮಂಜುನಾಥ್(ಕೆಎಎಸ್‌ ಅಧಿಕಾರಿ)–ವ್ಯವಸ್ಥಾಪಕ ನಿರ್ದೇಶಕ, ಕೈಮಗ್ಗ ಅಭಿವೃದ್ಧಿ ನಿಗಮ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.