ADVERTISEMENT

ಶಾಲೆಯಲ್ಲಿ ಬಿದ್ದು ಬಾಲಕಿ ಸಾವು

​ಪ್ರಜಾವಾಣಿ ವಾರ್ತೆ
Published 5 ಜೂನ್ 2018, 19:30 IST
Last Updated 5 ಜೂನ್ 2018, 19:30 IST

ಎಚ್.ಡಿ.ಕೋಟೆ: ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಡೆಸ್ಕ್‌ನಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ವಿದ್ಯಾರ್ಥಿನಿ ಮಂಗಳವಾರ ಮೃತಪಟ್ಟಿದ್ದಾಳೆ.

ತಾಲ್ಲೂಕಿನ ಹಿರೇಹಳ್ಳಿ ಎ ಕಾಲೊನಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ ಸ್ವಾಮಿಗೌಡ ಅವರ ಪುತ್ರಿ ಲಕ್ಷ್ಮಿ (7) ಮೃತಪಟ್ಟ ಬಾಲಕಿ.

ಸೋಮವಾರ ಶಾಲೆಯಲ್ಲಿ ಡೆಸ್ಕ್‌ನಿಂದ ಬಿದ್ದು ಮೂವರು ವಿದ್ಯಾರ್ಥಿನಿಯರು ಸಣ್ಣಪುಟ್ಟ ಗಾಯಗಳನ್ನು ಮಾಡಿಕೊಂಡಿದ್ದರು. ಅದರಲ್ಲಿ ಲಕ್ಷಿ ಮನೆಗೆ ತೆರಳಿದ ನಂತರ ತೀವ್ರ ತಲೆನೋವಿನಿಂದ ಕುಸಿದುಬಿದ್ದಳು. ಮೈಸೂರಿನ ಜೆಎಸ್‌ಎಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೆದುಳಿಗೆ ತೀವ್ರ ಗಾಯವಾಗಿದ್ದರಿಂದ ಶಸ್ತ್ರಚಿಕಿತ್ಸೆಯನ್ನೂ ನಡೆಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾಳೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.