ADVERTISEMENT

ಶಾಸಕರ ಗಣಿ ಗದ್ದಲ: ಮಾ. 5ಕ್ಕೆ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2011, 17:00 IST
Last Updated 23 ಫೆಬ್ರುವರಿ 2011, 17:00 IST

ಬೆಂಗಳೂರು: ಗಣಿ ಗದ್ದಲಕ್ಕೆ ಸಂಬಂಧಿಸಿದಂತೆ ಕೊಟ್ಟಿರುವ ನೋಟಿಸ್‌ಗೆ ಉತ್ತರ ನೀಡಲು ಅನೇಕ ಶಾಸಕರು ಸಮಯಾವಕಾಶ ಕೋರಿರುವ ಕಾರಣ ಈ ಕುರಿತ ವಿಚಾರಣೆಯನ್ನು ಮಾರ್ಚ್ 5ಕ್ಕೆ ಮುಂದೂಡಲಾಗಿದೆ.

ಬಿಜೆಪಿಯ ಶ್ರೀಕಾಂತ ಕುಲಕರ್ಣಿ ನೇತೃತ್ವದಲ್ಲಿ ಸದನ ಸಮಿತಿ ನೇಮಿಸಿದ್ದು, ಅದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವರಾದ ಜಿ.ಕರುಣಾಕರರೆಡ್ಡಿ, ಜಿ.ಜನಾರ್ದನ ರೆಡ್ಡಿ, ಶಾಸಕರಾದ ಜಿ.ಸೋಮಶೇಖರರೆಡ್ಡಿ, ಸುರೇಶಬಾಬು ಸೇರಿದಂತೆ ಇತರರಿಗೆ ನೋಟಿಸ್ ನೀಡಿತ್ತು. ಇವರೆಲ್ಲರೂ ನೋಟಿಸ್‌ಗೆ ಉತ್ತರ ನೀಡಲು ಸಮಯ ಕೇಳಿರುವ ಕಾರಣ ವಿಚಾರಣೆ ಮುಂದೂಡಲಾಗಿದೆ ಎಂದು ಕುಲಕರ್ಣಿ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.