ADVERTISEMENT

ಶಾಸಕ ಮಲ್ಲಿಕಾರ್ಜುನ ಖೂಬಾ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2018, 19:30 IST
Last Updated 3 ಏಪ್ರಿಲ್ 2018, 19:30 IST
ರಾಣೆಬೆನ್ನೂರಿನಲ್ಲಿ ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಅವರ ನಿವಾಸಕ್ಕೆ ತೆರಳಿ, ರಾಜೀನಾಮೆ ಪತ್ರ ಸಲ್ಲಿಸಿದ ಶಾಸಕ ಮಲ್ಲಿಕಾರ್ಜುನ ಖೂಬಾ
ರಾಣೆಬೆನ್ನೂರಿನಲ್ಲಿ ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಅವರ ನಿವಾಸಕ್ಕೆ ತೆರಳಿ, ರಾಜೀನಾಮೆ ಪತ್ರ ಸಲ್ಲಿಸಿದ ಶಾಸಕ ಮಲ್ಲಿಕಾರ್ಜುನ ಖೂಬಾ   

ರಾಣೆಬೆನ್ನೂರು: ಬೀದರ್‌ ಜಿಲ್ಲೆಯ ಬಸವಕಲ್ಯಾಣ ವಿಧಾಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ ಮಂಗಳವಾರ ತಮ್ಮ ಸ್ಥಾನಕ್ಕೆ ಸಲ್ಲಿಸಿದ್ದು, ಅದನ್ನು ಅಂಗೀಕರಿಸಲಾಗಿದೆ.

ನಗರದಲ್ಲಿರುವ ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಅವರ ನಿವಾಸಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ ಅವರು, ತಮ್ಮ ಮುಂದಿನ ನಡೆಯನ್ನು ಬುಧವಾರ ಪ್ರಕಟಿಸುವುದಾಗಿ ಹೇಳಿದರು.

‘ಬಿಜೆಪಿ ಸೇರುವ ವಿಷಯವಾಗಿ ತಮ್ಮ ಕ್ಷೇತ್ರದಲ್ಲಿ ಯಾರೂ ವಿರೋಧ ಮಾಡಿಲ್ಲ. ವಿರೋಧ ಮಾಡಿ, ಬಸವಕಲ್ಯಾಣದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದವರು ಕಾಂಗ್ರೆಸ್‌ ಏಜೆಂಟರು’ ಎಂದು ಖೂಬಾ ಆಪಾದಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.