ADVERTISEMENT

ಶಾಸಕ ಸ್ಥಾನಕ್ಕೆ ಶ್ರೀರಾಮುಲು ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2014, 7:32 IST
Last Updated 19 ಮಾರ್ಚ್ 2014, 7:32 IST

ಬೆಂಗಳೂರು: ಬಿಜೆಪಿ ತೊರೆದು ಬಿಎಸ್‌ಆರ್‌ ಕಾಂಗ್ರೆಸ್‌ ಪಕ್ಷ ಕಟ್ಟಿದ್ದ ಬಿ. ಶ್ರೀರಾಮುಲು ಅವರು ಬುಧವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಧಾನಸಭೆಯಲ್ಲಿ ಸ್ಪೀಕರ್‌ ಕಾಗೋಡು ತಿಮ್ಮಪ್ಪ ಅವರನ್ನು ಭೇಟಿ ಮಾಡಿದ ರಾಮುಲು ಅವರು ಬಿಎಸ್‌ಆರ್‌ ಕಾಂಗ್ರೆಸ್‌ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.

ಇತ್ತೀಚಿಗೆ ಮಾತೃಪಕ್ಷ ಬಿಜೆಪಿಗೆ ಮರಳಿರುವ ರಾಮುಲು, ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ ಎಂದು ತಿಳಿದು ಬಂದಿದೆ.

ಇನ್ನು, ರಾಮುಲು ಅವರು ಸಲ್ಲಿಸಿರುವ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರು ತಿಳಿಸಿರುವುದಾಗಿ ಮೂಲಗಳು ಹೇಳಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.