ADVERTISEMENT

ಶಿಕ್ಷಕರ ಸಮಸ್ಯೆ ನಿವಾರಣೆಗೆ 15 ದಿನದಲ್ಲಿ ಸಭೆ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2011, 19:30 IST
Last Updated 5 ಸೆಪ್ಟೆಂಬರ್ 2011, 19:30 IST

ಹುಬ್ಬಳ್ಳಿ:  ಶಿಕ್ಷಕರ ಎಲ್ಲ ಸಮಸ್ಯೆಗಳ ಪರಿಹಾರಕ್ಕೆ 15 ದಿನಗಳಲ್ಲಿಯೇ ಶಿಕ್ಷಕರ ಸಂಘಟನೆ ಮುಖಂಡರು, ಶಿಕ್ಷಣ ಇಲಾಖೆ ಸಚಿವರು ಹಾಗೂ ಅಧಿಕಾರಿಗಳ ಮಹತ್ವದ ಸಭೆಯನ್ನು ಬೆಂಗಳೂರಿನಲ್ಲಿ ನಡೆಸುವುದಾಗಿ  ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಪ್ರಕಟಿಸಿದರು.

ನಗರದಲ್ಲಿ ಸೋಮವಾರ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
`ಶಿಕ್ಷಕರ ವೇತನ ತಾರತಮ್ಯ ನಿವಾರಣೆಗಾಗಿ ರಚಿಸಲಾಗಿದ್ದ ಸಮಿತಿ ತನ್ನ ವರದಿಯನ್ನು ಸಲ್ಲಿಸಿದ್ದು, ಸಮಿತಿಯ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರಲು ಚಿಂತಿಸಲಾಗುತ್ತಿದೆ.

1994-95ನೇ ಶೈಕ್ಷಣಿಕ ಸಾಲಿಗಿಂತ ಮುಂಚೆ ಸ್ಥಾಪನೆಯಾದ ಶಿಕ್ಷಣ ಸಂಸ್ಥೆಗಳಿಗೆ ವೇತನ ಅನುದಾನ ನೀಡಲು ಈಗಾಗಲೇ ನಿರ್ಧಾರ ಕೈಗೊಳ್ಳಲಾಗಿದ್ದು, ಮೊದಲ ಹಂತದಲ್ಲಿ 65 ಕೋಟಿ ರೂಪಾಯಿ ಅನುದಾನವನ್ನು ಬಿ•ಡುಗಡೆ ಮಾಡಲಾಗಿದೆ~ ಎಂದು ತಿಳಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಾಥಮಿಕ ುತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ,     ~ಕಡ್ಡಾಯ ಶಿಕ್ಷಣದ ಹಕ್ಕು ಕಾನೂನಿನ ಪರಿಣಾಮಕಾರಿ ಅನುಷ್ಠಾನಕ್ಕೆ ಅಗತ್ಯ ನೆರವು ನೀಡುವಂತೆ ಕೇಂದ್ರಕ್ಕೆ ಕೋರಿಕೆ ಸಲ್ಲಿಸಲಾಗಿದೆ~ ಎಂದರು.

ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಜಗದೀಶ ಶೆಟ್ಟರ ಮಾತನಾಡಿದರು.ಶಾಸಕ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 47 ಜನ ಶಿಕ್ಷಕರಿಗೆ ರಾಜ್ಯಮಟ್ಟದ ಪ್ರಶಸ್ತಿ ನೀಡಿ, ಪುರಸ್ಕರಿಸಲಾಯಿತು. ಇದೇ ಮೊದಲ ಸಲ ಪದವಿಪೂರ್ವ ಕಾಲೇಜಿನ ನಾಲ್ವರು ಶಿಕ್ಷಕರಿಗೂ ಪ್ರಶಸ್ತಿ ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.