ADVERTISEMENT

ಶಿರಸಿಯಲ್ಲಿ 6 ಸೆಂ.ಮೀ ಮಳೆ

​ಪ್ರಜಾವಾಣಿ ವಾರ್ತೆ
Published 1 ಜನವರಿ 2013, 19:59 IST
Last Updated 1 ಜನವರಿ 2013, 19:59 IST
ಶಿರಸಿಯಲ್ಲಿ 6 ಸೆಂ.ಮೀ ಮಳೆ
ಶಿರಸಿಯಲ್ಲಿ 6 ಸೆಂ.ಮೀ ಮಳೆ   

ಬೆಂಗಳೂರು: ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ರಾಜ್ಯದ ಒಳನಾಡು ಮತ್ತು ಕರಾವಳಿಯ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಶಿರಸಿಯಲ್ಲಿ ಗರಿಷ್ಠ 6 ಸೆಂ.ಮೀ ಮಳೆಯಾಗಿದೆ.

ಹಾವೇರಿ 4, ಬ್ಯಾಡಗಿ, ಸವಣೂರು 3, ಬನವಾಸಿ, ಹಾನಗಲ್, ಕಳಸ 2, ಉಡುಪಿ, ಕೋಟ,  ತ್ಯಾಗರ್ತಿ, ಆನವಟ್ಟಿ ಮತ್ತು ಶಿರಾಳಕೊಪ್ಪದಲ್ಲಿ 1 ಸೆಂ.ಮೀ ಮಳೆಯಾಗಿದೆ. ಚಾಮರಾಜನಗರದಲ್ಲಿ ಕನಿಷ್ಠ ಉಷ್ಣಾಂಶ 15.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಪ್ರಕಟನೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.