ADVERTISEMENT

‌ಶಿರಸಿ: ಬಸ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಚಿನ್ನಾಭರಣ, ನಗದು ವಶ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2018, 9:15 IST
Last Updated 29 ಏಪ್ರಿಲ್ 2018, 9:15 IST
ಸಂಗ್ರಹ ಚಿತ್ರ.
ಸಂಗ್ರಹ ಚಿತ್ರ.   

ಶಿರಸಿ: ಸಾರಿಗೆ ಬಸ್‌ನಲ್ಲಿ ಯಾವುದೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ನಗದು ಹಾಗೂ ಚಿನ್ನಾಭರಣವನ್ನು ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಭಾನುವಾರ ವಶಪಡಿಸಿಕೊಂಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಕವಚೂರ ಗ್ರಾಮದ ಬಳಿ, ಅಧಿಕಾರಿಗಳು ತಪಾಸಣೆ ನಡೆಸಿದಾಗ ಸಾರಿಗೆ ಬಸ್‌ನಲ್ಲಿ ಚಿನ್ನಾಭರಣ, ನಗದು ಪತ್ತೆಯಾಗಿದೆ.

₹10 ಲಕ್ಷ ಮೌಲ್ಯದ 770 ಗ್ರಾಂ ಚಿನ್ನ, ₹2ಲಕ್ಷ ಮೌಲ್ಯದ ಬೆಳ್ಳಿ ಆಭರಣಗಳು ಸೇರಿದಂತೆ ₹1.35ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.

ADVERTISEMENT

ಎಸ್‌.ಜಿ. ಹೆಗಡೆ ನೇತೃತ್ವದಲ್ಲಿ ಶಿರಸಿ ಮಾರುಕಟ್ಟೆ ಠಾಣೆಯ ಎಎಸ್‌ಐ ರತ್ನಾಕರ ಆಚಾರಿ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಹಣ ಸಾಗಿಸುತ್ತಿದ್ದವರು ಸಿದ್ದಪುರದ ಚಂದ್ರಹಾಸ ಶೇಠ್‌ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.