ADVERTISEMENT

ಶಿರಾಡಿ ಘಾಟಿ ಸುರಂಗ : ಬರುವ ಜನವರಿಯಲ್ಲಿ ಟೆಂಡರ್‌

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2017, 19:30 IST
Last Updated 21 ಮಾರ್ಚ್ 2017, 19:30 IST
ಬೆಂಗಳೂರು: ಶಿರಾಡಿ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ 2018 ಜನವರಿಯಲ್ಲಿ ಟೆಂಡರ್‌ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಎಚ್‌.ಸಿ. ಮಹದೇವಪ್ಪ ತಿಳಿಸಿದ್ದಾರೆ.
 
ವಿಧಾನ ಪರಿಷತ್‌ನಲ್ಲಿ ಮಂಗಳವಾರ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಕೇಳಿದ ಪ್ರಶ್ನೆಗೆ ಅವರು ಲಿಖಿತ ಉತ್ತರ ನೀಡಿದ್ದಾರೆ.
 
ಸುರಂಗ ಮಾರ್ಗ ನಿರ್ಮಾಣದ ಕಾರ್ಯಸಾಧ್ಯತೆ  ಬಗ್ಗೆ  ಗುರುಗ್ರಾಮದ  ಜಿಯೋ ಕನ್ಸಲ್‌ಟೆಂಟ್‌ ಸಂಸ್ಥೆ ವರದಿ ಸಿದ್ಧಪಡಿಸುತ್ತಿದೆ. ಇದಕ್ಕಾಗಿ ಕೇಂದ್ರ ಭೂಸಾರಿಗೆ ಸಚಿವಾಲಯ ₹10.15 ಕೋಟಿ ಮಂಜೂರು ಮಾಡಿದೆ.

ಸುರಂಗ ಮತ್ತು ಸೇತುವೆಗಳು ಬರುವ  21 ಕಡೆ ಭೂಮಿಯಲ್ಲಿ ರಂಧ್ರ ಕೊರೆದು ಪರೀಕ್ಷಿಸಲಾಗಿದೆ. ವರದಿ ಪಡೆದ ನಂತರ  ಟೆಂಡರ್‌ ಕರೆಯಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.