
ಪ್ರಜಾವಾಣಿ ವಾರ್ತೆ
ಶಿರಾ: ರಾಷ್ಟ್ರೀಯ ಹೆದ್ದಾರಿ–4ರಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಐವರ ಮೇಲೆ ಕಾರ್ ಹರಿದು ನಾಲ್ವರು ಮೃತಪಟ್ಟಿರುವ ಘಟನೆ ಗುರುವಾರ ಮಧ್ಯಾಹ್ನ ಕಳ್ಳಂಬೆಳ್ಳ ಸಮೀಪದ ದೊಡ್ಡ ಆಲದ ಮರ ಬಳಿ ನಡೆದಿದೆ.
ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರಲ್ಲಿ ಮೂವರು ಮಹಿಳೆಯರು, ಒಬ್ಬ ವಿದ್ಯಾರ್ಥಿ ಸೇರಿದ್ದಾರೆ. ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ದೊಡ್ಡ ಆಲದಮರದ ಬಳಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ಬೆಂಗಳೂರು ಮಾರ್ಗವಾಗಿ ಬಂದ ಟವೇರಾ ಕಾರು ಪ್ರಯಾಣಿಕರ ಮೇಲೆ ಹರಿದು ಅಪಘಾತ ಸಂಭವಿಸಿತು.
ಘಟನೆ ಕುರಿತು ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.