ADVERTISEMENT

ಶಿವರಾಮಗೌಡ ಮನವೊಲಿಕೆ: ಜೋಶಿ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2014, 19:30 IST
Last Updated 10 ಮಾರ್ಚ್ 2014, 19:30 IST

ಹುಬ್ಬಳ್ಳಿ:  ‘ಕೊಪ್ಪಳ ಕ್ಷೇತ್ರದಲ್ಲಿ ಟಿಕೆಟ್‌ ವಂಚಿತರಾಗಿ ಮುನಿಸಿಕೊಂಡಿರುವ ಹಾಲಿ ಸಂಸದ ಶಿವರಾಮಗೌಡ ಅವರ ಮನವೊಲಿಸುವ ಕೆಲಸ ನಡೆಯುತ್ತಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ ಸೋಮವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

‘ಕೊಪ್ಪಳದಲ್ಲಿ ಕರಡಿ ಸಂಗಣ್ಣ ಅವರಿಗೆ ಟಿಕೆಟ್‌ ನೀಡಿರುವುದು ಪಕ್ಷದ ರಾಷ್ಟ್ರೀಯ ಚುನಾವಣಾ ಸಮಿತಿಯ ನಿರ್ಧಾರ. ಅದರಲ್ಲಿ ರಾಜ್ಯ ಸಮಿತಿಯ ಯಾವುದೇ ಪಾತ್ರವಿಲ್ಲ’ ಎಂದು ಅವರು ಸ್ಪಷ್ಟಪಡಿಸಿದರು. 24ರಂದು ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ತಾವು ನಾಮಪತ್ರ ಸಲ್ಲಿಸುವುದಾಗಿ ಜೋಶಿ   ಈ ವೇಳೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.