ADVERTISEMENT

ಶಿಸ್ತು ಕ್ರಮ ಬಿಟ್ಟು ಬೇಡಿಕೆ ಈಡೇರಿಸಿ: ಹೊರಟ್ಟಿ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2012, 19:30 IST
Last Updated 14 ಏಪ್ರಿಲ್ 2012, 19:30 IST

ಬೆಂಗಳೂರು: ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬಹಿಷ್ಕರಿಸಿರುವ ಉಪನ್ಯಾಸಕರ ವಿರುದ್ಧ ಶಿಸ್ತು ಕ್ರಮಕೈಗೊಳ್ಳುವ ಮಾತು ಬಿಟ್ಟು, ಸರ್ಕಾರ ಕೂಡಲೇ ಅವರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಆಗ್ರಹಿಸಿದ್ದಾರೆ.

ಮೌಲ್ಯಮಾಪನ ಮಾಡುವ ಉಪನ್ಯಾಸಕರದು ಯಾವುದೇ ತಪ್ಪು ಇಲ್ಲದಿದ್ದರೂ, ಶಿಸ್ತು ಕ್ರಮಕೈಗೊಳ್ಳುವುದಾಗಿ ಸರ್ಕಾರ ಹೆದರಿಸುತ್ತಿರುವುದು ಸರಿಯಲ್ಲ. ಸರ್ಕಾರ ನೀಡಿದ್ದ ಭರವಸೆಯಂತೆ ಇದೇ 12ರಂದು ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಂಡಿದ್ದರೆ ಈ ಸಮಸ್ಯೆ ಉದ್ಭವಿಸುತ್ತಿರಲಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಮೌಲ್ಯಮಾಪನದಲ್ಲಿ ಪಾಲ್ಗೊಳ್ಳುವ 15 ಸಾವಿರ ಉಪನ್ಯಾಸಕರು ಸರ್ಕಾರದ ಬೆದರಿಕೆಗೆ ಹೆದರುವ ಅವಶ್ಯಕತೆ ಇಲ್ಲ. ವಸ್ತುಸ್ಥಿತಿಯನ್ನು ಅರ್ಥಮಾಡಿಕೊಳ್ಳದೆ ಉಪನ್ಯಾಸಕರನ್ನು ತಪ್ಪಿತಸ್ಥರ ಸ್ಥಾನದಲ್ಲಿ ನಿಲ್ಲಿಸುವ ಪ್ರಯತ್ನ ಸರಿಯಲ್ಲ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಕೂಡಲೇ ಪರಿಸ್ಥಿತಿಯನ್ನು ತಿಳಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.