ಬೆಂಗಳೂರು: ಶುಕ್ರವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ರಾಜ್ಯದಲ್ಲಿ ಈಶಾನ್ಯ ಮಾರುತ ಕ್ಷೀಣಿಸಿದೆ. ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಒಣಹವೆ ಮುಂದುವರೆದಿದ್ದು, ಕೆಲವೆಡೆ ಶೀತಮಾರುತ ಚುರುಕುಗೊಂಡಿದೆ.
ಬಂಗಾಳಕೊಲ್ಲಿಯ ಕೆಲವೆಡೆ ಮುಂದಿನ 48 ಗಂಟೆಗಳಲ್ಲಿ ವಾಯುಭಾರ ಕುಸಿತದ ತೀವ್ರತೆ ಹೆಚ್ಚಾಗುವ ಸಂಭವವಿದೆ. ರಾಜ್ಯದ ಒಳನಾಡು ಮತ್ತು ಕರಾವಳಿಯ ಕೆಲವು ಭಾಗಗಳಲ್ಲಿ ಉಷ್ಣಾಂಶದಲ್ಲಿ ಇಳಿಕೆ ಕಂಡುಬಂದ್ದ್ದಿದು, ಚಾಮರಾಜನಗರದಲ್ಲಿ ಕನಿಷ್ಠ ಉಷ್ಣಾಂಶ 9.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮುಂದಿನ 48 ಗಂಟೆಗಳವರೆಗೂ ರಾಜ್ಯದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕನಿಷ್ಠ ಉಷ್ಣಾಂಶ
ಚಾಮರಾಜನಗರ: ಜಿಲ್ಲೆಯಲ್ಲಿ 9.5 ಡಿಗ್ರಿ ಕನಿಷ್ಠ ಉಷ್ಣಾಂಶವಿದ್ದು, ಜನರು ಚಳಿಯಿಂದ ತತ್ತರಿಸುವಂತಾಗಿದೆ. ಶೀತಗಾಳಿ ಜನಜೀವನ ಅಸ್ತವ್ಯಸ್ತಗೊಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.