ADVERTISEMENT

ಶೆಟ್ಟರ್ ಸಹೋದರ ಅಭ್ಯರ್ಥಿ: ಬಿಎಸ್‌ವೈ ಕೋಪ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2013, 19:59 IST
Last Updated 3 ಆಗಸ್ಟ್ 2013, 19:59 IST

ಹಾವೇರಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರ ಸಹೋದರ ಪ್ರದೀಪ ಶೆಟ್ಟರ್ ಅವರನ್ನು ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನಾಗಿ ಮಾಡಿರುವ ಜಗದೀಶ ಶೆಟ್ಟರ್ ವಿರುದ್ಧ ಕೆಜೆಪಿ ಅಧ್ಯಕ್ಷರಾದ ಬಿ.ಎಸ್ ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಸಜ್ಜನರ ಅಭ್ಯರ್ಥಿ: ಧಾರವಾಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಗೆ ಕೆಜೆಪಿ ಅಭ್ಯರ್ಥಿಯಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಶಿವರಾಜ ಸಜ್ಜನರ ಹೆಸರು ಅಂತಿಮಗೊಂಡಿದೆ.

ಕೆಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಶನಿವಾರ ಇಲ್ಲಿ ಶಿವರಾಜ ಸಜ್ಜನರ ನಿವಾಸದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಮುಖಂಡರು ಅಭ್ಯರ್ಥಿ ಹೆಸರನ್ನು ಅಂತಿಮಗೊಳಿಸಿದ್ದು, ಸೋಮವಾರ ಅಧಿಕೃತವಾಗಿ ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಸಜ್ಜನರ ಅವರು ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.