ADVERTISEMENT

ಶೇ 30ರಷ್ಟು ಮಧ್ಯಂತರ ಪರಿಹಾರಕ್ಕೆ ನಿರ್ಣಯ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2017, 19:44 IST
Last Updated 15 ಅಕ್ಟೋಬರ್ 2017, 19:44 IST

ಕಲಬುರ್ಗಿ: ‘6ನೇ ವೇತನ ಆಯೋಗ ವರದಿ ನೀಡುವುದು ವಿಳಂಬವಾಗಿರುವುದರಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಶೇ 30ರಷ್ಟು ಮಧ್ಯಂತರ ಪರಿಹಾರ ನೀಡಬೇಕು’ ಎಂಬ ನಿರ್ಣಯವನ್ನು ಭಾನುವಾರ ಇಲ್ಲಿ ನಡೆದ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತಿನ 9ನೇ ತ್ರೈಮಾಸಿಕ ಸಭೆಯಲ್ಲಿ ಕೈಗೊಳ್ಳಲಾಯಿತು.

‘6ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವಾಗ ಸ್ಥಳೀಯ ಸಂಸ್ಥೆಗಳ ನೌಕರರಿಗೂ ಏಕ ಕಾಲದಲ್ಲಿ ಅನ್ವಯವಾಗುವಂತೆ ಆದೇಶ ಹೊರಡಿಸಬೇಕು. ಕರ್ನಾಟಕ ಮಹಾನಗರ ಪಾಲಿಕೆಗಳು (ಅಧಿಕಾರಿಗಳು ಮತ್ತು ಸಿಬ್ಬಂದಿ ಸಾಮಾನ್ಯ ನೇಮಕಾತಿ) ನಿಯಮಗಳು 2011ಕ್ಕೆ ತಿದ್ದುಪಡಿ ತರಬೇಕು. ಮುಂಬಡ್ತಿಗೆ ಸಂಬಂಧಿಸಿದಂತೆ ವೃಂದ ಮತ್ತು ನೇಮಕಾತಿ ನಿಯಮಾವಳಿಗಳಲ್ಲಿ ಸೂಕ್ತ ಅನುಪಾತ ನಿಗದಿಪಡಿಸಬೇಕು ಮತ್ತು ತಿದ್ದುಪಡಿ ಮಾಡಬೇಕು. ಅನ್ಯ ಇಲಾಖೆಯಿಂದ ಅಧಿಕಾರಿ ಮತ್ತು ಸಿಬ್ಬಂದಿ ನಿಯೋಜಿಸುವ ಕ್ರಮ ಕೈಬಿಡಬೇಕು’ ಎಂಬ ನಿರ್ಣಯಗಳನ್ನೂ ಅಂಗೀಕರಿಸಲಾಯಿತು.

ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷ ಎಸ್.ಎಚ್. ಗುರುಮೂರ್ತಿ, ಉಪಾಧ್ಯಕ್ಷ ಬಿ.ವೆಂಕಟರಾಮ್, ಪ್ರಧಾನ ಕಾರ್ಯದರ್ಶಿ ಟಿ.ಸಿ. ಬಸವರಾಜಯ್ಯ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.