ADVERTISEMENT

ಶೋಧನಾ ಸಮಿತಿಗೆ ಹಾಲಿ ಕುಲಪತಿಗಳು

​ಪ್ರಜಾವಾಣಿ ವಾರ್ತೆ
Published 6 ಜುಲೈ 2013, 19:59 IST
Last Updated 6 ಜುಲೈ 2013, 19:59 IST

ಬೆಂಗಳೂರು: ತುಮಕೂರು ವಿಶ್ವವಿದ್ಯಾಲಯದ ಕುಲಪತಿ ನೇಮಕಕ್ಕೆ ಮೂವರ ಹೆಸರನ್ನು ಶಿಫಾರಸು ಮಾಡಲು ವಿಜಾಪುರ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಡಾ.ಮೀನಾ ಚಂದಾವರಕರ ಅಧ್ಯಕ್ಷತೆಯಲ್ಲಿ ಶೋಧನಾ ಸಮಿತಿ ರಚಿಸಲಾಗಿದೆ.

ಸಾಮಾನ್ಯವಾಗಿ ವಿಶ್ರಾಂತ ಕುಲಪತಿಗಳ ಅಧ್ಯಕ್ಷತೆಯಲ್ಲಿ ಶೋಧನಾ ಸಮಿತಿ ರಚಿಸಲಾಗುತ್ತದೆ. ಆದರೆ, ಮೊದಲ ಬಾರಿಗೆ ಹಾಲಿ ಕುಲಪತಿಗಳ ಅಧ್ಯಕ್ಷತೆಯಲ್ಲಿ ಶೋಧನಾ ಸಮಿತಿ ರಚಿಸಲಾಗಿದೆ. ಮತ್ತೊಬ್ಬ ಹಾಲಿ ಕುಲಪತಿ ಡಾ.ಎಂ.ಜಿ.ಕೃಷ್ಣನ್ (ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ) ಸದಸ್ಯರಾಗಿದ್ದಾರೆ.

ಹಾಲಿ ಕುಲಪತಿಗಳನ್ನು ಶೋಧನಾ ಸಮಿತಿಗೆ ನೇಮಕ ಮಾಡಿದ ಉದಾಹರಣೆ ಇಲ್ಲ. ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗುವ ಸಾಧ್ಯತೆಯೂ ಇದೆ. ಸಮಿತಿಯ ಮೇಲೆ ಪ್ರಭಾವ ಬೀರುವ ಉದ್ದೇಶದಿಂದಲೇ ಇಬ್ಬರು ಕುಲಪತಿಗಳನ್ನು ನೇಮಕ ಮಾಡಿದಂತಿದೆ ಎಂಬ ಮಾತು ಕೇಳಿ ಬರುತ್ತಿದೆ.

ವಿಶ್ವವಿದ್ಯಾಲಯ ಅನುದಾನ ಆಯೋಗದ ಪ್ರತಿನಿಧಿಯಾಗಿ ಆನಂದಕೃಷ್ಣ, ಸಿಂಡಿಕೇಟ್ ಪ್ರತಿನಿಧಿಯಾಗಿ ಬ್ಯಾಥ್ಯೂಸ್ ಅವರು ಶೋಧನಾ ಸಮಿತಿಯಲ್ಲಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.