ADVERTISEMENT

ಶೌರ್ಯ ದಿನ ಆಚರಣೆಗೆ ಯತ್ನಿಸಿದವರ ಬಂಧನ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2017, 12:40 IST
Last Updated 6 ಡಿಸೆಂಬರ್ 2017, 12:40 IST
– ಸಾಂದರ್ಭಿಕ ಚಿತ್ರ
– ಸಾಂದರ್ಭಿಕ ಚಿತ್ರ   

ಧಾರವಾಡ: ಬಾಬ್ರಿ ಮಸೀದಿ ಧ್ವಂಸಕ್ಕೆ 25 ವರ್ಷಗಳು ತುಂಬಿದ ಸಂದರ್ಭದಲ್ಲಿ ಬುಧವಾರ ಶೌರ್ಯ ದಿನ ಆಚರಣೆಗೆ ಮುಂದಾದ ಕೆಲ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಧಾರವಾಡದ ವಿವೇಕಾನಂದ ವೃತ್ತದಲ್ಲಿ ಶೌರ್ಯ ದಿನ ಆಚರಿಸಲು ಕೆಲ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿದ್ದರು. ಶೌರ್ಯ ದಿನ ಆಚರಣೆ ಹಾಗೂ ವಿಜಯೋತ್ಸವಕ್ಕೆ ನಗರ ಠಾಣೆಯ ಪೊಲೀಸರು ಅನುಮತಿ ನಿರಾಕರಿಸಿದ್ದರು. ಹೀಗಾಗಿ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಹತ್ತಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT