ADVERTISEMENT

ಶ್ರವಣಬೆಳಗೊಳಕ್ಕೆ ವಿಶೇಷ ರೈಲು

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2017, 19:30 IST
Last Updated 16 ಅಕ್ಟೋಬರ್ 2017, 19:30 IST

ಬೆಂಗಳೂರು: ಹಾಸನ ಜಿಲ್ಲೆ ಶ್ರವಣಬೆಳಗೊಳದಲ್ಲಿ ಗೊಮ್ಮಟೇಶ್ವರ ಮೂರ್ತಿಗೆ ಫೆಬ್ರುವರಿಯಲ್ಲಿ ನಡೆಯುತ್ತಿರುವ ಮಹಾಮಸ್ತಕಾಭಿಷೇಕಕ್ಕೆ ತೆರಳುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಒಂದು ತಿಂಗಳು ವಿಶೇಷ ರೈಲುಗಳ ಸಂಚಾರ ಆರಂಭಿಸಲು ರೈಲ್ವೆ ಇಲಾಖೆ ಸಿದ್ಧತೆ ನಡೆಸಿದೆ.

ಫೆ.7ರಿಂದ 26ರವರೆಗೆ ಮಸ್ತಕಾಭಿಷೇಕ ನಡೆಯಲಿದ್ದು, ಈ ಸಂದರ್ಭದಲ್ಲಿ ಬೆಂಗಳೂರಿನಿಂದ ಶ್ರವಣಬೆಳಗೊಳ ಮಾರ್ಗವಾಗಿ ಹಾಸನದವರೆಗೆ ವಿಶೇಷ ರೈಲುಗಳು ಸಂಚರಿಸಲಿವೆ.

‘ಈ ಸಂಬಂಧ ಶ್ರವಣಬೆಳಗೊಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದ್ದು, ಜನವರಿಯಲ್ಲಿ ಅಧಿಸೂಚನೆ ಹೊರಡಿಸಲಾಗುವುದು. ಎಷ್ಟು ವಿಶೇಷ ರೈಲುಗಳು ಸಂಚರಿಸಬೇಕು ಎಂಬುದನ್ನು ಯಾತ್ರಾರ್ಥಿಗಳ ಸಂಖ್ಯೆ ಆಧರಿಸಿ ನಿರ್ಧರಿಸಲಾಗುವುದು’ ಎಂದು ಇಲಾಖೆ ಹಿರಿಯ ಅಧಿಕಾರಿಗಳು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.