ಬೆಂಗಳೂರು: ಬಾದಾಮಿಯ ಬಿಜೆಪಿ ಅಭ್ಯರ್ಥಿ ಶೀರಾಮುಲು ಪರವಾಗಿ ನಟ ಸುದೀಪ್ ಪ್ರಚಾರ ಕೈಗೊಳ್ಳಲಿದ್ದಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿರುವ ಸುದೀಪ್ ಅವರು ಶ್ರೀರಾಮುಲು ವಿರುದ್ಧ ಪ್ರಚಾರ ಕೈಗೊಳ್ಳುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಸುದೀಪ್ ಅವರು, ನಾನು ಶ್ರೀರಾಮುಲು ಅವರ ಪರ ಪ್ರಚಾರ ಕೈಗೊಳ್ಳುತ್ತೇನೆ ಎಂಬ ವಿಚಾರದಲ್ಲಿ ಯಾವುದೇ ಸತ್ಯಾಂಶವಿಲ್ಲ. ಶ್ರೀರಾಮುಲು ಅವರು ನನಗೆ ಬಹಳ ವರ್ಷಗಳಿಂದ ಗೊತ್ತಿರುವ ವ್ಯಕ್ತಿ. ಅವರಿಗೆ ಒಳ್ಳೆಯದಾಗಲಿ ಎಂದು ಶುಭಹಾರೈಸುತ್ತೇನೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.