ADVERTISEMENT

ಸಂಸದನ ಬಂಧನ ಸೇಡಿನ ರಾಜಕಾರಣ: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2017, 19:30 IST
Last Updated 3 ಡಿಸೆಂಬರ್ 2017, 19:30 IST
ಬಿ.ಎಸ್.ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ   

ಕಲಬುರ್ಗಿ: ‘ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಸಂಸದ ಪ್ರತಾಪ್‌ಸಿಂಹ ಅವರನ್ನು ಬಂಧಿಸಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೇಡಿನ ರಾಜಕಾರಣವಾಗಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯ ಅಫಜಲಪುರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪರಿವರ್ತನಾ ಯಾತ್ರೆಯಲ್ಲಿ ಅವರು ಮಾತನಾಡಿದರು.
‘ಪ್ರತಾಪ್‌ಸಿಂಹ ಹಾಗೂ ಕಾರ್ಯಕರ್ತರನ್ನು ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿದ ಅವರು, ‘ರಾಜ್ಯದಲ್ಲಿ ತುಘಲಕ್ ದರ್ಬಾರ್ ನಡೆಸುತ್ತಿರುವ ಸಿದ್ದರಾಮಯ್ಯ ಇನ್ನು ಮೂರು ತಿಂಗಳು ಮಾತ್ರ ಅಧಿಕಾರದಲ್ಲಿ ಇರುತ್ತಾರೆ. ಹೀಗಾಗಿ ಅವರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ’ ಎಂದು ವ್ಯಂಗ್ಯವಾಡಿದರು.

ಮರಳು ಆಮದು ನಾಚಿಕೆಗೇಡಿನ ವಿಷಯ:

ADVERTISEMENT

‘ಮಲೇಷ್ಯಾದಿಂದ ಮರಳು ಆಮದು ಮಾಡಿಕೊಳ್ಳುವ ತೀರ್ಮಾನ ನಾಚಿಕೆಗೇಡಿನ ವಿಷಯ. ಯಾವುದೇ ಕಾರಣಕ್ಕೂ ಅಲ್ಲಿಂದ ಮರಳು ತರಲು ಬಿಡುವುದಿಲ್ಲ. ರಾಜ್ಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮರಳು ಲಭ್ಯವಿದೆ. ಆದರೆ, ಸಿದ್ದರಾಮಯ್ಯ ಅದನ್ನು ಸರಿಯಾದ ರೀತಿಯಲ್ಲಿ ಸಾರ್ವಜನಿಕರಿಗೆ ವಿತರಿಸುವ ಬಗ್ಗೆ ಯೋಚನೆ ಮಾಡುತ್ತಿಲ್ಲ. ಲೋಕೋಪಯೋಗಿ ಸಚಿವರ ಪುತ್ರ ಮತ್ತು ಹಲವು ಸಚಿವರ ಪುತ್ರರು ಮರಳು ದಂಧೆಯಲ್ಲಿ ತೊಡಗಿದ್ದಾರೆ. ಇದನ್ನು ಮೊದಲು ತಡೆಗಟ್ಟಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.