ADVERTISEMENT

ಸಂಸದೆ ಶೋಭಾ ಕರಂದ್ಲಾಜೆಗೆ ಟಿಕೆಟ್ ಇಲ್ಲ: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2018, 10:23 IST
Last Updated 9 ಏಪ್ರಿಲ್ 2018, 10:23 IST
ಸಂಸದೆ ಶೋಭಾ‌‌ ಕರಂದ್ಲಾಜೆ
ಸಂಸದೆ ಶೋಭಾ‌‌ ಕರಂದ್ಲಾಜೆ   

ಬೆಂಗಳೂರು: ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಲಾಗುವುದಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರು ಸೋಮವಾರ ತಿಳಿಸಿದರು.

ಶೋಭಾ‌‌ಕರಂದ್ಲಾಜೆ ಸೇರಿದಂತೆ ಬೇರೆ ಯಾವುದೇ ಸಂಸದರಿಗೆ ಟಿಕೆಟ್ ಕೊಡುವುದು ಬೇಡ ಎಂದು ವರಿಷ್ಠರಿಗೆ ತಿಳಿಸಿರುವುದಾಗಿ ಯಡಿಯೂರಪ್ಪ ಹೇಳಿದರು.

ಸಂಸದ ಶ್ರೀರಾಮುಲು, ನನ್ನನ್ನು ಬಿಟ್ಟು ಬೇರೆ ಯಾವುದೇ ಸಂಸದರಿಗೆ ವಿಧಾನಸಭಾ ಚುನಾವಣೆ ಟಿಕೆಟ್ ನೀಡುವುದಿಲ್ಲ ಎಂದು ಯಡಿಯೂರಪ್ಪ ಹೇಳಿದರು.

ADVERTISEMENT

ಟಿಕೆಟ್ ಹಂಚಿಕೆ ವಿಚಾರದಲ್ಲಿ ಬಿಜೆಪಿಯ ನಿಲುವನ್ನು ಖಂ ಡಿಸಿದ ಟಿಕೆಟ್ ಆಕಾಂಕ್ಷಿ ಎನ್.ಆರ್ ರಮೇಶ್ ಅವರು ಟಿಕೆಟ್ ₹2 ಕೋಟಿಗೆ ಮಾರಾಟವಾಗಿದೆ ಎಂದು ಆರೋಪಿಸಿದ್ದಾರೆ. 

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.