ಬೆಂಗಳೂರು: ಕಾವೇರಿ ಜಲ ವಿವಾದದ ಬಗ್ಗೆ ವಿಧಾನಮಂಡಲದ ವಿಶೇಷ ಅಧಿವೇಶನ ನಡೆಯುತ್ತಿರುವ ವೇಳೆ ವಿಧಾನಸಭೆಯಲ್ಲಿ ಸಚಿವೆ ಉಮಾಶ್ರೀ ಅವರು ಚುಕ್ಕಿ ರಂಗೋಲಿ ಬಿಡಿಸುವುದರಲ್ಲಿ ನಿರತರಾಗಿದ್ದರು.
ಕಾವೇರಿ ವಿಚಾರವಾಗಿ ಜೆಡಿಎಸ್‌ನ ಎಚ್.ಡಿ. ರೇವಣ್ಣ ಅವರು ಮಾತನಾಡುತ್ತಿದ್ದ ವೇಳೆ ಸಚಿವೆ ಉಮಾಶ್ರೀ ಅವರು ತಮ್ಮ ಟಿಪ್ಪಣಿ ಹಾಳೆಯಲ್ಲಿ ಚುಕ್ಕಿ ರಂಗೋಲಿ ಬಿಡಿಸುತ್ತಿದ್ದುದು ಸುದ್ದಿ ವಾಹಿನಿಗಳ ಕ್ಯಾಮೆರಾ ಕಣ್ಣಿಗೆ ಬಿದ್ದಿದೆ.
ಉಮಾಶ್ರೀ ಅವರು ಸದನದಲ್ಲಿ ಚರ್ಚೆ ನಡೆಯುತ್ತಿದ್ದ ವೇಳೆ ರಂಗೋಲಿ ಬಿಡಿಸುತ್ತಿದ್ದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.