ADVERTISEMENT

ಸಮನ್ವಯ ಸಮಿತಿಯಲ್ಲಿ ಚರ್ಚೆ ಮಾಡಿ ಸಾಲಮನ್ನಾ ಮಾಡಬೇಕು: ಎಚ್‌.ಡಿ.ದೇವೇಗೌಡ

​ಪ್ರಜಾವಾಣಿ ವಾರ್ತೆ
Published 23 ಮೇ 2018, 5:49 IST
Last Updated 23 ಮೇ 2018, 5:49 IST
ಸಮನ್ವಯ ಸಮಿತಿಯಲ್ಲಿ ಚರ್ಚೆ ಮಾಡಿ ಸಾಲಮನ್ನಾ ಮಾಡಬೇಕು: ಎಚ್‌.ಡಿ.ದೇವೇಗೌಡ
ಸಮನ್ವಯ ಸಮಿತಿಯಲ್ಲಿ ಚರ್ಚೆ ಮಾಡಿ ಸಾಲಮನ್ನಾ ಮಾಡಬೇಕು: ಎಚ್‌.ಡಿ.ದೇವೇಗೌಡ   

ಬೆಂಗಳೂರು: ಸಾಲಮನ್ನಾ ಮಾಡಲು ನಮಗೆ ಪೂರ್ಣ ಬಹುಮತ ಸಿಕ್ಕಿದೆಯಾ? 37 ಜನರನ್ನು ಇಟ್ಟುಕೊಂಡು ಸಾಲಮನ್ನಾ ಮಾಡಲು ಆಗುತ್ತಾ? ಸಮನ್ವಯ ಸಮಿತಿಯಲ್ಲಿ ಚರ್ಚೆ ಮಾಡಿ ಸಾಲಮನ್ನಾ ಮಾಡಬೇಕಷ್ಟೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಬುಧವಾರ ಹೇಳಿದ್ದಾರೆ.

ಇಲ್ಲಿನ ಪದ್ಮನಾಭನಗರದ ನಿವಾಸದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ನಾನು ಪಕ್ಷದ ಅಧ್ಯಕ್ಷ ಅನ್ನೋದಕ್ಕೆ ಹೆಚ್ಚಾಗಿ ತಂದೆ ತಾಯಿಯಾಗಿ ಅರ್ಶಿವಾದ ಮಾಡುತ್ತಿದ್ದೇವೆ, ಇದು ತಂದೆ ತಾಯಿಗಳಾದ ನಮ್ಮ ಕರ್ತವ್ಯ ಎಂದರು.

ADVERTISEMENT

ಸಮ್ಮಿಶ್ರ ಸರ್ಕಾರದಲ್ಲಿ ಬಿನ್ನಾಭಿಪ್ರಾಯ ಬರದಂತೆ ನೋಡಿಕೊಳ್ಳುವುದಕ್ಕಾಗಿ ಸಮನ್ವಯ ಸಮಿತಿ ರಚನೆ ಮಾಡಲಾಗಿದೆ, ಇದರಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದ್ದಾರೆ, ಅವರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಿ ಎಂದು ನೂತನ ಸಿಎಂ ಕುಮಾರಸ್ವಾಮಿಗೆ ದೇವೇಗೌಡರು ಸಲಹೆ ಮಾಡಿದರು.

ವಿವಿಧ ರಾಜ್ಯಗಳಿಂದ ಎಲ್ಲಾ ಪ್ರಾದೇಶಿಕ ಪಕ್ಷಗಳ ನಾಯಕರು ಬಂದಿದ್ದಾರೆ, ತೃತೀಯ ರಂಗದ ಬಗ್ಗೆ ಈಗಲೇ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ದೇವೇಗೌಡರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.