ಬೆಂಗಳೂರು: ಮಕ್ಕಳ ಕಲಿಕಾ ಪ್ರಗತಿ ಮತ್ತು ಶೈಕ್ಷಣಿಕ ಗುಣಮಟ್ಟದ ಬಗೆಗೆ ಪಾಲಕರೊಂದಿಗೆ ಚರ್ಚಿಸಲು ಇದೇ 7 ಮತ್ತು 10ರಂದು ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ (ಪ್ರೌಢಶಿಕ್ಷಣ) ಹನುಮಂತರಾಯಪ್ಪ ತಿಳಿಸಿದ್ದಾರೆ.
ಶಾಲೆಯಲ್ಲಿ ಕಾಲಕಾಲಕ್ಕೆ ನಡೆಯುವ ಕಿರು ಪರೀಕ್ಷೆಗಳು ಹಾಗೂ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶವನ್ನು ಆಧರಿಸಿ, ಮಕ್ಕಳ ಶೈಕ್ಷಣಿಕ ಉನ್ನತಿಗಾಗಿ ಪಾಲಕರು, ಶಿಕ್ಷಕರೊಂದಿಗೆ ಹೇಗೆ ಶ್ರಮಿಸಬೇಕೆಂದು ಸಮುದಾಯದತ್ತ ಶಾಲೆ ಯ ಕಾರ್ಯಕ್ರಮದ ಮೂಲಕ ಚರ್ಚಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಪ್ರಾಥಮಿಕ ಶಾಲೆಗಳಲ್ಲಿ ಇದೇ 7ರಂದು ಹಾಗೂ ಪ್ರೌಢಶಾಲೆಗಳಲ್ಲಿ 10ರಂದು ಪ್ರತಿ ತರಗತಿಗೂ ಪ್ರತ್ಯೇಕ ಸಮಯದಲ್ಲಿ ಕಾರ್ಯಕ್ರಮ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.