ADVERTISEMENT

ಸಮ್ಮೇಳನದ ಬಾಕಿ ಶೀಘ್ರ ಪಾವತಿ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2011, 18:30 IST
Last Updated 8 ಫೆಬ್ರುವರಿ 2011, 18:30 IST

ಬೆಂಗಳೂರು: ನಗರದಲ್ಲಿ ನಡೆದ 77ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ದುಡಿದ ಮತ್ತು ಸಹಕರಿಸಿದ ಎಲ್ಲರಿಗೂ ಸ್ವಾಗತ ಸಮಿತಿ ಅಧ್ಯಕ್ಷರೂ ಆದ ಗೃಹ ಸಚಿವ ಆರ್.ಅಶೋಕ್ ಅಭಿನಂದನೆ ಸಲ್ಲಿಸಿದರು.

ಸಮ್ಮೇಳನ ನಿರೀಕ್ಷೆ ಮೀರಿ ಯಶಸ್ಸು ಕಂಡಿದೆ ಎಂದು ಹರ್ಷ ವ್ಯಕ್ತಪಡಿಸಿದ ಅವರು ಕನ್ನಡ ಸಾಹಿತ್ಯ ಪರಿಷತ್‌ಗೆ ಇನ್ನೂ 1.5 ಕೋಟಿ ರೂಪಾಯಿ  ಬಾಕಿ ನೀಡಬೇಕಿದ್ದು, ಅದನ್ನು ಇನ್ನೊಂದು ವಾರದಲ್ಲಿ ಪಾವತಿಸಲಾಗುವುದು ಎಂದರು.

ಸಮ್ಮೇಳನಕ್ಕೆ 4ರಿಂದ 5 ಕೋಟಿ ರೂಪಾಯಿ ಖರ್ಚಾಗಿರುವ ಸಾಧ್ಯತೆ ಇದ್ದು, ಸದ್ಯದಲ್ಲೇ ಪೂರ್ಣ ಲೆಕ್ಕಪತ್ರ ನೀಡಲಾಗುವುದು. ನಗರ ಜಿಲ್ಲಾಧಿಕಾರಿಯೇ ಖಂಜಾಚಿ ಕೂಡ ಆಗಿದ್ದಾರೆ ಎಂದು ಹೇಳಿದರು.

ಸಾಹಿತ್ಯ ಸಮ್ಮೇಳನದ ಅಂಗವಾಗಿ ಆಯೋಜಿಸಿದ್ದ ಪುಸ್ತಕ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸುಮಾರು 8 ಕೋಟಿ ರೂಪಾಯಿ ಮೊತ್ತದ ಪುಸ್ತಕಗಳು ಮಾರಾಟವಾಗಿವೆ ಎಂದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.