ADVERTISEMENT

ಸರ್ಕಾರಿ ಕಾಲೇಜುಗಳಿಗೆ ಮೂಲ ಸೌಕರ್ಯ: ರವಿ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2012, 19:30 IST
Last Updated 5 ಆಗಸ್ಟ್ 2012, 19:30 IST

ವಿಜಾಪುರ: ರಾಜ್ಯದಲ್ಲಿನ ಒಟ್ಟು 360 ಸರ್ಕಾರಿ ಕಾಲೇಜುಗಳಿಗೆ ಮೂಲ ಸೌಕರ್ಯ ಒದಗಿಸಲು ಮೊದಲ ಆದ್ಯತೆ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಸಿ.ಟಿ. ರವಿ ಭಾನುವಾರ ಇಲ್ಲಿ ಹೇಳಿದರು.

ಇಲ್ಲಿಯ ಮಹಿಳಾ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ, ಪ್ರಗತಿ ಪರಿಶೀಲನೆ ನಡೆಸಿದ ಬಳಿಕ  ಪತ್ರಿಕಾಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದ ಅವರು,.ಎಲ್ಲ ಸರ್ಕಾರಿ ಕಾಲೇಜುಗಳಲ್ಲಿ ಪ್ರಯೋಗಾಲಯ, ಶೌಚಾಲಯ ನಿರ್ಮಾಣಕ್ಕೆ ಇದೇ ವರ್ಷ ಕ್ರಮ ತೆಗೆದು ಕೊಳ್ಳಲಾಗುವುದು. ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದರು.

ರಾಜ್ಯದ ವಿಶ್ವವಿದ್ಯಾಲಯಗಳನ್ನು ಇನ್ನಷ್ಟು ಸಮರ್ಥಶಾಲಿಯನ್ನಾಗಿ ಮಾಡಬೇಕಾಗಿದೆ. ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ 17 ವಿಶ್ವವಿದ್ಯಾಲಯಗಳು ಒಳಪಡುತ್ತವೆ. ಎಲ್ಲ ವಿಶ್ವವಿದ್ಯಾಲಯಗಳಿಗೆ ಭೇಟಿ ನೀಡಿ, ಅಲ್ಲಿಯ ಅವಶ್ಯಕತೆಗಳಿಗೆ ಯೋಜನೆ ರೂಪಿಸಿ, ವಿಶ್ವವಿದ್ಯಾಲಯಗಳನ್ನು ಶಕ್ತಿಶಾಲಿಯನ್ನಾಗಿ ಮಾಡಬೇಕು ಎನ್ನುವ ಚಿಂತನೆ ಸರ್ಕಾರ ನಡೆಸಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.